ರಾಮನಗರ: ಪ್ರೀತಿ ನಿರಾಕರಿಸಿದ್ದಕ್ಕೆ ವ್ಯಕ್ತಿಯೋರ್ವ ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ ನಡೆಸಿ ಅಮಾನವೀಯತೆ ಮೆರೆದ ಘಟನೆ ಜಿಲ್ಲೆ ಕನಕಪುರ ತಾಲೂಕಿನ ಬೈಪಾಸ್ ರಸ್ತೆ ನಾರಾಯಣಪ್ಪ ಕೆರೆ ಬಳಿ ಶುಕ್ರವಾರ ನಡೆದಿದೆ. ಆ್ಯಸಿಡ್ ದಾಳಿಯಿಂದ ಬಾಲಕಿಯ ಎಡ ಕಣ್ಣಿಗೆ ತೀವ್ರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಲಾಗಿದೆ.
ಕನಕಪುರದಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ - kanakapura acid attack case
ಪ್ರೀತಿ ನಿರಾಕರಿಸಿದಳೆಂದು ದುಷ್ಕರ್ಮಿಯೋರ್ವ ಅಪ್ರಾಪ್ತೆ ಮೇಲೆ ಆ್ಯಸಿಡ್ ಎರಚಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದಿದೆ.
ಕನಕಪುರದಲ್ಲಿ ಪ್ರೀತಿ ನಿರಾಕರಿಸಿದಕ್ಕೆ ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ
ದಾಳಿಕೋರನು ತನ್ನನ್ನು ಪ್ರೀತಿಸುವಂತೆ ಅಪ್ರಾಪ್ತೆಗೆ ಒತ್ತಾಯಿಸಿದ್ದು, ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆ್ಯಸಿಡ್ ಎರಚಿದ್ದಾನೆ ಎಂದು ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಆ್ಯಸಿಡ್ ದಾಳಿ ನಡೆಸಿದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಪಾಲಾರ್ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ; ಪೊಲೀಸರಿಂದ ತನಿಖೆ