ರಾಮನಗರ: ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ, ಮಾಜಿ ಡಾನ್ ಮುತ್ತಪ್ಪ ರೈ ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮುತ್ತಪ್ಪ ರೈ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ: ಬಿಡದಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ - ಮುತ್ತಪ್ಪ ರೈ ಅಂತಿಮ ವಿಧಿವಿಧಾನ
ಮಾಜಿ ಡಾನ್ ಮುತ್ತಪ್ಪ ರೈ ಅವರ ಬಿಡದಿಯ ನಿವಾಸದಲ್ಲಿ ನಡೆಯಲಿರುವ ಅಂತಿಮ ವಿಧಿವಿಧಾನ ಕಾರ್ಯಗಳಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದ್ರೆ, ಕೋವಿಡ್ -19 ಹಿನ್ನೆಲೆ ಯಾವುದೇ ಕಾರಣಕ್ಕೂ ಜನಸಂದಣಿ ಸೇರುವಂತಿಲ್ಲ. ಅದಕ್ಕಾಗಿ ಪೊಲೀಸರು ಮುತ್ತಪ್ಪ ರೈ ನಿವಾಸಕ್ಕೆ ಹೋಗುವ ರಸ್ತೆಯನ್ನು ಬಂದ್ ಮಾಡಿದ್ದು, ಮೃತದೇಹ ತರುತ್ತಿದ್ದಂತೆಯೇ ವಿಧಿ ವಿಧಾನಗಳನ್ನು ಪೂರ್ಣಗೊಳಿಸಲು ಸಿದ್ಧತೆ ನಡೆಸಿದ್ದಾರೆ.
ಮುತ್ತಪ್ಪ ರೈ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ದತೆ: ಪೊಲೀಸ್ ಬಿಗಿ ಬಂದೋಬಸ್ತ್
ಬಿಡದಿಯ ಅವರ ನಿವಾಸದ ಬಳಿ ನಡೆಯಲಿರುವ ಅಂತಿಮ ವಿಧಿವಿಧಾನ ಕಾರ್ಯಗಳಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ, ಕೋವಿಡ್ -19 ಹಿನ್ನೆಲೆ ಯಾವುದೇ ಕಾರಣಕ್ಕೂ ಜನಸಂದಣಿ ಸೇರುವಂತಿಲ್ಲ. ಅದಕ್ಕಾಗಿ ಪೊಲೀಸರು ಮುತ್ತಪ್ಪ ರೈ ನಿವಾಸಕ್ಕೆ ಹೋಗುವ ರಸ್ತೆ ಬಂದ್ ಮಾಡಿದ್ದು, ಮೃತದೇಹ ತರುತ್ತಿದ್ದಂತೆಯೇ ವಿಧಿ ವಿಧಾನಗಳನ್ನು ಪೂರ್ಣಗೊಳಿಸಲು ಸಿದ್ಧತೆ ನಡೆಸಿದ್ದಾರೆ.
ಇನ್ನು ಬಿಡದಿ ಪೊಲೀಸರು ಮುತ್ತಪ್ಪ ರೈ ನಿವಾಸಕ್ಕೆ ಹೊಂದಿಕೊಂಡಿರುವ ರಸ್ತೆಯಲ್ಲಿ 2 ಕಿ. ಮೀ ದೂರದಲ್ಲಿಯೇ ಬ್ಯಾರಿಕೇಡ್ ಹಾಕಿದ್ದಾರೆ. ಯಾರೊಬ್ಬರೂ ಒಳಹೋಗದಂತೆ ಕಟ್ಟೆಚ್ಚರ ವಹಿಸಿದ್ದಾರೆ.