ರಾಮನಗರ: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್ ಸೋಲು ಕಂಡಿದೆ. ಜನರು ಕೊಟ್ಟಿರುವ ತೀರ್ಪಿಗೆ ನಾವು ತಲೆಬಾಗಲೇ ಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಜನರ ತೀರ್ಪಿಗೆ ನಾವು ತಲೆಬಾಗಲೇಬೇಕು: ಅನಿತಾ ಕುಮಾರಸ್ವಾಮಿ - Anita Kumaraswamy reaction in by election Result
ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲು ಕಂಡಿದೆ. ಜನರು ಕೊಟ್ಟಿರುವ ತೀರ್ಪಿಗೆ ನಾವು ತಲೆಬಾಗಬೇಕೆಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಕ್ಷೇತ್ರ ಪ್ರವಾಸದಲ್ಲಿ ಪಾಲ್ಗೊಂಡಿದ್ದ ವೇಳೆ ಮಾತನಾಡಿದ ಅವರು, ಮಂಡ್ಯದಲ್ಲೂ ಜೆಡಿಎಸ್ಗೆ ಸೋಲಾಗಿದೆ. ರಾಜಕೀಯ ಯಾವತ್ತೂ ನಿಂತ ನೀರಲ್ಲ. ಇಂದು ಇದ್ದದ್ದು ನಾಳೆ ಬದಲಾಗುತ್ತೆ. ಆವರೆಗೂ ತಾಳ್ಮೆಯಿಂದಿರಬೇಕಷ್ಟೇ. ಜನರಿಗೆ ಈಗಲೂ ನಮ್ಮ ಬಗ್ಗೆ ನಂಬಿಕೆ ಇದೆ ಎಂದರು.
ಜೆಡಿಎಸ್ ರಾಜ್ಯಾಧ್ಯಕ್ಷರು ರಾಜೀನಾಮೆ ಕೊಡುವ ವಿಚಾರ ನನಗೆ ಗೊತ್ತಿಲ್ಲ. ದೊಡ್ಡವರ ತೀರ್ಮಾನಕ್ಕೆ ಬದ್ಧವಾಗಿರಬೇಕು. ಚುನಾವಣೆಗಳು ಬರುತ್ತವೆ, ಹೋಗುತ್ತವೆ. ಅಧಿಕಾರಕ್ಕಾಗಿ ಇನ್ನೊಂದು ಪಕ್ಷಕ್ಕೆ ಹೋದವರನ್ನು ಜನರು ಸ್ವೀಕರಿಸಿದ್ದಾರಲ್ಲ ಅದೇ ನನಗೆ ಆಶ್ಚರ್ಯ ಆಗಿದೆ ಎಂದರು. ಈ ಚುನಾವಣೆಯಲ್ಲಿ ಯಾವ ಅಂಶ ಪ್ರಭಾವ ಬೀರಿದೆ ಎಂಬುದು ನನಗೆ ಗೊತ್ತಿಲ್ಲ. ಮುಂದಿನ ದಿನಗಳಲ್ಲಿ ಆ ಬಗ್ಗೆ ಜನರಿಗೆ ಮನವರಿಕೆಯಾಗಬೇಕು ಅನಿತಾ ಕುಮಾರಸ್ವಾಮಿ ಹೇಳಿದ್ರು.