ರಾಮನಗರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಆ ಮೂಲಕ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ರಾಮನಗರದಲ್ಲಿ ಕೊರೊನಾಗೆ ಮತ್ತೊಂದು ಬಲಿ: ಮೃತರ ಸಂಖ್ಯೆ 10ಕ್ಕೆ ಏರಿಕೆ - Another death for Corona
ರಾಮನಗರ ತಾಲೂಕಿನ ಹುಣಸನಹಳ್ಳಿ ಗ್ರಾಮದ ಹಿರಿಯ ರಂಗಭೂಮಿ ಕಲಾವಿದರೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ರಾಮನಗರದಲ್ಲಿ ಕೊರೊನಾಗೆ ಮತ್ತೊಂದು ಬಲಿ
ರಾಮನಗರ ತಾಲೂಕಿನ ಹುಣಸನಹಳ್ಳಿ ಗ್ರಾಮದ ವ್ಯಕ್ತಿ ಸಾವನ್ನಪ್ಪಿದ್ದು, ಇವರು ಹಿರಿಯ ರಂಗಭೂಮಿ ಕಲಾವಿದರಾಗಿದ್ದರು. ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಬೆಂಗಳೂರಿನ ರಾಜ ರಾಜೇಶ್ವರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೇ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.