ರಾಮನಗರ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿರುವ ಹಿನ್ನೆಲೆ ಬೆಳ್ಳಂಬೆಳಗ್ಗೆ ರಾಮನಗರ ಪೊಲೀಸರು ದಾಳಿ ನಡೆಸಿ, ಪಿಎಫ್ಐ ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ರಾಮನಗರದಲ್ಲಿ ಪೊಲೀಸರಿಂದ ದಾಳಿ: ಪಿಎಫ್ಐ ಕಾರ್ಯಕರ್ತರು ವಶಕ್ಕೆ - ramanagara police attack news
ಮಂಗಳವಾರ ಬೆಳ್ಳಂಬೆಳಗ್ಗೆ ಪೊಲೀಸರು ಪಿಎಫ್ಐ ಕಾರ್ಯಕರ್ತರ ಮನೆ ಮೇಲೆ ದಾಳಿ ನಡೆಸಿ, 15 ಜನರನ್ನು ವಶಕ್ಕೆ ಪಡೆದಿದ್ದಾರೆ.
ರಾಮನಗರದಲ್ಲಿ ಎನ್ಐಎ, ಪೊಲೀಸರಿಂದ ದಾಳಿ
ಇತ್ತೀಚೆಗೆ ರಾಮನಗರದಲ್ಲಿ ಎನ್ಐಎ ದಾಳಿ ನಡೆಸಿ, ಪಿಎಫ್ಐ ಸಂಘಟನೆ ಮುಖಂಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಇದರ ಬೆನ್ನಲ್ಲೇ ಇದೀಗ ಪೊಲೀಸರು ದಾಳಿ ನಡೆಸಿದ್ದಾರೆ. ಮಂಗಳವಾರ 15 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಪಿಎಫ್ಐ ಮುಖಂಡರ ಮನೆ ಮೇಲೆ ಪೊಲೀಸ್ ದಾಳಿ; ಇಬ್ಬರು ಮಾಜಿ ಮುಖಂಡರು ವಶ
Last Updated : Sep 27, 2022, 1:06 PM IST