ರಾಮನಗರ : ಬುಧವಾರ ಅಕಾಲಿಕವಾಗಿ ಸುರಿದ ಬಿರುಗಾಳಿ ಸಹಿತ ಮಳೆಯಿಂದಾಗಿ ಹುಲುಸಾಗಿ ಬೆಳೆದಿದ್ದ ಬಾಳೆ ಬೆಳೆ ನೆಲಕಚ್ಚಿರುವ ಘಟನೆ ಕನಕಪುರ ತಾಲೂಕಲ್ಲಿ ನಡೆದಿದೆ.
ಅಕಾಲಿಕ ಮಳೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆ ನಾಶ - undefined
ಅಪರೂಪಕ್ಕೆ ಬಿದ್ದ ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ಬಾಳೆ ಬೆಳೆ ಸಂಪೂರ್ಣ ನೆಲಕಚ್ಚಿದೆ. ಸುಮಾರು 4 ಎಕರೆ ಪ್ರದೇಶದಲ್ಲಿ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ಅಕಾಲಿಕ ಮಳೆಯಿಂದ ನಾಶವಾಗಿವೆ.
ಕನಕಪುರ ತಾಲೂಕು ಕಾಡಹಳ್ಳಿ ಗ್ರಾಮದ ತಿಬ್ಬೇಗೌಡ ಎಂಬುವರಿಗೆ ಸೇರಿದ ಬಾಳೆ ಬೆಳೆ ಸಂಪೂರ್ಣ ನಾಶವಾಗಿದ್ದು ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸುಮಾರು 4 ಎಕರೆ ಪ್ರದೇಶದಲ್ಲಿ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳನ್ನು ಬೆಳದಿದ್ದರು. ಇನ್ನು ಕೆಲವೇ ದಿನಗಳಲ್ಲಿ ಬಾಳೆ ಫಸಲು ಕೈಗೆ ಸಿಗುತ್ತಿತ್ತು. ಆದರೆ ಕಳೆದ ರಾತ್ರಿ ಸುರಿದ ಬಿರುಗಾಳಿ ಮಳೆಯಿಂದ ಬೆಳೆ ಸಂಪೂರ್ಣ ನೆಲಕಚ್ಚಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾದ ಪರಿಸ್ಥಿತಿ ಉಂಟಾಗಿದೆ.
ಸ್ಥಳಕ್ಕೆ ಕೃಷಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಚುನಾವಣಾ ಸಮಯವಾದ್ದರಿಂದ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಕೂಡ ಸರಿಯಾಗಿ ಸ್ಪಂದಿಸುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.