ಕರ್ನಾಟಕ

karnataka

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಆರು ದಿನಗಳವರೆಗೆ ಆರೋಪಿಗಳು ಪೊಲೀಸ್​ ವಶಕ್ಕೆ

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಆರು ದಿನಗಳವರೆಗೆ ಪೊಲೀಸರ ವಶಕ್ಕೆ ನೀಡಲಾಗಿದೆ.

By

Published : Oct 31, 2022, 5:06 PM IST

Published : Oct 31, 2022, 5:06 PM IST

basavalinga swamiji suicide case
ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ

ರಾಮನಗರ: ಕಂಚುಗಲ್​ ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಮೂವರು ಆರೋಪಿಗಳನ್ನು ಆರು ದಿನಗಳ ಅವಧಿಗೆ ಪೊಲೀಸರ ವಶಕ್ಕೆ ನೀಡಲಾಗಿದೆ.

ರಾಮನಗರ ಜಿಲ್ಲಾ ಪೊಲೀಸರು ಮಾಗಡಿ 1ನೇ ಜೆಎಂಎಫ್​ಸಿ ನ್ಯಾಯಾಲಯದ ನ್ಯಾಯಾಧೀಶರಾದ ಧನಲಕ್ಷ್ಮೀ ಎದುರು ಆರೋಪಿಗಳನ್ನು ಹಾಜರುಪಡಿಸಿದ್ದರು. ಈ ವೇಳೆ ಪೊಲೀಸರ ಬೇಡಿಕೆಯನ್ನು ಪುರಸ್ಕರಿಸಿದ ನ್ಯಾಯಾಧೀಶರು, ಆರೋಪಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಿದರು.

ಪ್ರಕರಣದ ಆರೋಪಿಗಳಾದ ಕಣ್ಣೂರು ಮಠದ ಡಾ. ಮೃತ್ಯುಂಜಯ ಸ್ವಾಮೀಜಿ, ನಿವೃತ್ತ ಶಿಕ್ಷಕ ಮತ್ತು ವಕೀಲ ಮಹದೇವಯ್ಯ, ಹನಿಟ್ರ್ಯಾಪ್​ನಲ್ಲಿ ಕಾಣಿಸಿಕೊಂಡಿದ್ದ ಯುವತಿಯನ್ನು ಹೆಚ್ಚಿನ ವಿಚಾರಣೆಗಾಗಿ ರಾಮನಗರ ಜಿಲ್ಲಾ ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ:ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಕೇಸ್​.. ಕಣ್ಣೂರು ಮಠದ ಸ್ವಾಮೀಜಿ, ಯುವತಿ ಸೇರಿ ಮೂವರು ಅರೆಸ್ಟ್​

ನವೆಂಬರ್ 5ರವರೆಗೂ ಆರೋಪಿಗಳು ಪೊಲೀಸರ ವಶದಲ್ಲಿರುತ್ತಾರೆ. ನಂತರ ಅವರನ್ನು ಮತ್ತೊಮ್ಮೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕು. ಒಂದು ವೇಳೆ ವಿಚಾರಣೆ ಅಗತ್ಯವಿದೆ ಎಂದಾದರೆ ಪೊಲೀಸರು ಅವರನ್ನು ಮತ್ತೆ ವಶಕ್ಕೆ ಕೇಳಬಹುದು ಎಂದು ನ್ಯಾಯಾಧೀಶರು ಅಭಿಪ್ರಾಯ ವ್ಯಕ್ತಪಡಿಸಿದರು.

ಮೃತ ಬಸವಲಿಂಗ ಸ್ವಾಮೀಜಿ ತಮ್ಮ ಡೆತ್​ನೋಟ್​ನಲ್ಲಿ ಉಲ್ಲೇಖಿಸಿರುವ ಇತರರಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ. ಕಾಲ್​ ರೆಕಾರ್ಡ್​ ಮಾಡಿರುವ ಸ್ಥಳವಾದ ದೊಡ್ಡಬಳ್ಳಾಪುರಕ್ಕೂ ಆರೋಪಿ ಯುವತಿಯನ್ನು ಪೊಲೀಸರು ಕರೆದೊಯ್ದು ಸ್ಥಳ ಮಹಜರು ನಡೆಸಲಿದ್ದಾರೆ. ಆರೋಪಿಗಳನ್ನು ಒಟ್ಟು 10 ದಿನಗಳ ಅವಧಿಗೆ ವಶಕ್ಕೆ ಕೊಡಬೇಕು ಎಂದು ಪೊಲೀಸರು ಕೇಳಿದ್ದರು. ಆದರೆ ಸದ್ಯಕ್ಕೆ 6 ದಿನಗಳವರೆಗೆ ನ್ಯಾಯಾಲಯವು ಅನುಮತಿ ನೀಡಿದೆ.

ಇದನ್ನೂ ಓದಿ:ರಾಮನಗರ: ನೇಣು ಬಿಗಿದುಕೊಂಡು ಕಂಚುಗಲ್ಲು ಸ್ವಾಮೀಜಿ ಆತ್ಮಹತ್ಯೆ

ಆರೋಪಿಗಳ ಮೊಬೈಲ್ ವಶಕ್ಕೆ ಪಡೆದ ಪೊಲೀಸರು: ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಣೂರು ಮಠದ ಡಾ. ಮೃತ್ಯುಂಜಯಶ್ರೀ, ನಿವೃತ್ತ ಶಿಕ್ಷಕ ಮಹದೇವಯ್ಯ ಹಾಗೂ ಯುವತಿಯ ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಿಂದಾಗಿ ಇನ್ನಷ್ಟು ಗೌಪ್ಯ ಮಾಹಿತಿ ಬಹಿರಂಗವಾಗುವ ಸಾಧ್ಯತೆಯಿದ್ದು, ಮೃತ್ಯುಂಜಯ ಸ್ವಾಮೀಜಿ ಹಾಗೂ ಮಹದೇವಯ್ಯ ಅವರನ್ನು ರಾಮನಗರ ಜಿಲ್ಲಾ ಕಾರಾಗೃಹದಿಂದ ಹಾಗೂ ಯುವತಿಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಮಾಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ABOUT THE AUTHOR

...view details