ಕರ್ನಾಟಕ

karnataka

ETV Bharat / state

ನಿಯಂತ್ರಣ ತಪ್ಪಿ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್​: ಒಬ್ಬನ ಸಾವು ಮತ್ತೋರ್ವನ ಸ್ಥಿತಿ ಗಂಭೀರ - ರಾಮನಗರ ಬೈಕ್​ ಅಪಘಾತ

ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್​ ಒಂದು ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಜರುಗಿದೆ.

bike-accident-in-ramanagar
ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್

By

Published : Nov 30, 2021, 8:18 AM IST

ರಾಮನಗರ: ಚಲಿಸುತ್ತಿದ್ದ ಬೈಕ್​​​ ಒಂದು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಬಳಿ ನಡೆದಿದೆ.

ನಿಯಂತ್ರಣ ತಪ್ಪಿ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್

ಕುಣಿಗಲ್ ತಾಲೂಕು ನಾಗನಹಳ್ಳಿ ಸಮೀಪದ ಲಂಬಾಣಿ ತಾಂಡಾದ ವಾಸಿ ಬಾಲ ನಾಯ್ಕ(26) ಮೃತ ವ್ಯಕ್ತಿ. ಬಾಲ ಮತ್ತು ರಾಜು ಎಂಬುವರು ಬೈಕ್​ನಲ್ಲಿ ಯಾವುದೋ ಕೆಲಸದ ನಿಮಿತ್ತ ಮಾಗಡಿ ರಸ್ತೆಯ ಮೂಲಕ ರಾಮನಗರಕ್ಕೆ ಬರುತ್ತಿದ್ದರು. ಲಕ್ಷ್ಮೀಪುರ ಸಮೀಪದ ತಿರುವಿನಲ್ಲಿ ಬೈಕ್​ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ.

ಘಟನೆಯಲ್ಲಿ ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಬಾಲ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರ ರಾಜು ತೀವ್ರವಾಗಿ ಗಾಯಗೊಂಡಿದ್ದು, ರಾಮನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಮಾನವೀಯತೆ ಮೆರೆದ ಪತ್ರಕರ್ತ : ಅಪಘಾತದಲ್ಲಿ ಬಾಲ ಮೃತಪಟ್ಟಿದ್ದರೇ ರಾಜು ಗಂಭೀರ ಗಾಯಗೊಂಡು ಪ್ರಜ್ಞಾಹೀನವಾಗಿ ಬಿದ್ದಿದ್ದರು. ಈ ವೇಳೆ ಅದೇ ರಸ್ತೆಯಲ್ಲಿ ರಾಮನಗರಕ್ಕೆ ಹೋಗುತ್ತಿದ್ದ ಪತ್ರಕರ್ತ ಲಿಂಗರಾಜು ಅವರು ತಮ್ಮ ಕಾರಿನಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ರಾಮನಗರ ಗ್ರಾಮಾಂತರ ಠಾಣೆ ಸಿಪಿಐ ನರಸಿಂಹಮೂರ್ತಿ ಅವರು ಭೇಟಿ ನೀಡಿ ಪರಿಶೀಲಿಸಿದರು. ಬಾಲ ನಾಯ್ಕ ಮೃತ ದೇಹವನ್ನು ರಾಮನಗರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ABOUT THE AUTHOR

...view details