ರಾಮನಗರ :ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೊಂಡಾಪುರ ಮತ್ತು ಬಾಣಗಹಳ್ಳಿ ನಡುವಿನ ಕಣ್ವ ನದಿಗೆ ಕಳೆದ ಒಂದು ವರ್ಷದ ಹಿಂದೆಯಷ್ಟೇ ಸೇತುವೆ ನಿರ್ಮಾಣ ಮಾಡಲಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ರಾಮನಗರ ಜಿಲ್ಲೆಯಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ನೀರಿನ ರಭಸಕ್ಕೆ ಸೇತುವೆ ಕುಸಿದುಬಿದ್ದಿದೆ. ಕಣ್ವ ಜಲಾಶಯದಿಂದ ಹೆಚ್ಚಿನ ನೀರು ಹೊರಬಿಟ್ಟಿರುವ ಕಾರಣ ಸೇತುವೆ ಕುಸಿದಿದೆ.
ಗ್ರಾಮಗಳಲ್ಲಿನ ಜನರು ಇದೀಗ ಹತ್ತಾರು ಕಿಲೋ ಮೀಟರ್ಗಟ್ಟಲೆ ಸುತ್ತಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳಪೆ ಕಾಮಗಾರಿಯೇ ದುಸ್ಥಿತಿಗೆ ಕಾರಣವಾಗಿದ್ದು, ನಿರ್ಮಾಣ ಹಂತದಲ್ಲಿಯೇ ಸೇತುವೆಯ ಕಳಪೆ ಕಾಮಗಾರಿ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಆದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು, ತಾಂತ್ರಿಕವಾಗಿ ಹಾಕಬೇಕಿದ್ದ ಕಬ್ಬಿಣ ಬಳಸದೇ ಸೇತುವೆ ನಿರ್ಮಾಣ ಮಾಡಿದ್ದರು ಎಂಬ ಮಾತುಗಳು ಕೇಳಿಬರುತ್ತಿವೆ.