ಕರ್ನಾಟಕ

karnataka

ETV Bharat / state

ಬಿಎಸ್​ವೈ ವಿಶ್ವಾಸಮತ ಸಾಬೀತು: ರಾಮನಗರದಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ - ರಾಮನಗರದ ಐಜೂರು ವೃತ್ತ

ಸಿಎಂ ಬಿ.ಎಸ್​.ಯಡಿಯೂರಪ್ಪ ಇಂದು ವಿಶ್ವಾಸಮತ ಸಾಬೀತುಪಡಿಸಿದ ಹಿನ್ನೆಲೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು, ಬಿಎಸ್​ವೈ ಅಭಿಮಾನಿಗಳು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ರಾಮನಗರದಲ್ಲೂ ಕಾರ್ಯಕರ್ತರು ಪಟಾಕಿ ಹೊಡೆದು ಸಂಭ್ರಮ ಪಟ್ಟಿದ್ದಾರೆ.

ರಾಮನಗರದಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

By

Published : Jul 29, 2019, 5:45 PM IST

ರಾಮನಗರ: ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್​.ಯಡಿಯೂರಪ್ಪ ‌ಬಹುಮತ ಸಾಬೀತು‌ಪಡಿಸಿದ ಹಿನ್ನೆಲೆಯಲ್ಲಿ ಬಿಜೆಪಿ‌ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ರಾಮನಗರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

ರಾಮನಗರದ ಐಜೂರು ವೃತ್ತದಲ್ಲಿ‌ ಜನಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪಟಾಕಿ ಹೊಡೆದು, ಸಿಹಿ ಹಂಚಿ ಸಂಭ್ರಮಿಸಿದರು. ಜೊತೆಗೆ ರಾಜ್ಯ ಹಾಗೂ ರಾಷ್ಟ್ರೀಯ ಬಿಜೆಪಿ ನಾಯಕರ ಪರ ಜಯಘೋಷ ಕೂಗಿದರು. ರಾಮನಗರ ಜಿಲ್ಲಾ ಕಾರ್ಯಕರ್ತರು, ಮುಖಂಡರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದು, ಇದು ಪ್ರಜಾ‌ಪ್ರಭುತ್ವಕ್ಕೆ ಸಂದ ಜಯ ಎಂದರು.

ABOUT THE AUTHOR

...view details