ರಾಮನಗರ:ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಮ್ಮ 57 ನೇ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ.
ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಿ ಪಿ ಯೋಗೇಶ್ವರ್ - ಮಾಜಿ ಸಚಿವ ಸಿ.ಪಿ.ಯೋಗೇಶ್ವರ್
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಮ್ಮ 57 ನೇ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿಕೊಂಡಿದ್ದು, ಇದರ ಬದಲು ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ನೆರವಾಗಬಹುದಿತ್ತು ಎಂಬ ಮಾತುಗಳು ಕೇಳಿಬಂದಿದೆ.
ಸಿ.ಪಿ.ಯೋಗೇಶ್ವರ್ ಹುಟ್ಟುಹಬ್ಬ ಆಚರಣೆ
ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಿ ಪಿ ಯೋಗೇಶ್ವರ್
ಚನ್ನಪಟ್ಟಣದ ಕೊಲ್ಲಾಪುರದಮ್ಮ ದೇವಾಲಯದ ಆವರಣದಲ್ಲಿ ಸಿ.ಪಿ.ಯೋಗೇಶ್ವರ್ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ನಗರದ ತುಂಬೆಲ್ಲಾ ಬ್ಯಾನರ್ಗಳು, ಕಟೌಟ್ಗಳು ರಾರಾಜಿಸುತ್ತಿದ್ದವು. ಕಾರ್ಯಕರ್ತರು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಇಷ್ಟೊಂದು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡುವ ಬದಲು, ಪ್ರವಾಹದಿಂದ ಮನೆ-ಮಠ, ಜಮೀನು ಕಳೆದುಕೊಂಡು ಪರದಾಡುತ್ತಿರುವ ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ನೆರವಾಗಬಹುದಿತ್ತು ಎಂಬ ಮಾತುಗಳು ಈ ವೇಳೆ ಸಾರ್ವಜನಿಕ ವಲಯದಿಂದ ಕೇಳಿಬಂದವು.