ರಾಮನಗರ:ಕಾರೊಂದು ಬೈಕ್ ಸವಾರನಿಗೆ ಡಿಕ್ಕಿಯಾಗಿ, ಪಕ್ಕದಲ್ಲೇ ಇದ್ದ ಹೂ ಮಾರುತ್ತಿದ್ದ ವ್ಯಕ್ತಿಯನ್ನು ಬಲಿ ಪಡೆದಿರುವ ಘಟನೆ ರಾಮನಗರದ ಎಪಿಎಂಸಿ ಮಾರುಕಟ್ಟೆ ಬಳಿ ನಡೆದಿದೆ. ಕಾರು ಚಾಲಕ ಮತ್ತು ಬೈಕ್ ಸವಾರನಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಕಾರು ರಸ್ತೆಯ ಪಕ್ಕದಲ್ಲಿ ನಿಂತ್ತಿದ್ದ ಹೂ ಮಾರುತ್ತಿದ್ದ ಓರ್ವ ವ್ಯಕ್ತಿಗೆ ಹಾಗೂ ಬೈಕ್ ಸವಾರನಿಗೆ ಡಿಕ್ಕಿಯಾಗಿದೆ. ಸ್ಥಳದಲ್ಲೇ ಹೂ ಮಾರುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.