ರಾಮನಗರ:'ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ಅವಘಡ ಸಂಭವಿಸಿ ಫೈಟರ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ರಾಮನಗರ ಹೆಚ್ಚುವರಿ ಅಪರ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಕರಣದ ಆರೋಪಿಗಳಾದ ಲವ್ ಯೂ ರಚ್ಚು ಚಿತ್ರದ ನಿರ್ದೇಶಕ ಶಂಕರ, ಸಾಹಸ ನಿರ್ದೇಶಕ ವಿನೋದ್ ಕುಮಾರ್ ಹಾಗೂ ಕ್ರೇನ್ ಅಪರೇಟರ್ ಮಹದೇವ್‌ನನ್ನು ಬಿಡದಿ ಠಾಣೆ ಪಿಎಸ್ಐ ಭಾಸ್ಕರ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನು, ನಿರ್ಮಾಪಕ ಗುರು ದೇಶಪಾಂಡೆ, ಚಿತ್ರದ ಉಸ್ತುವಾರಿ ಫರ್ನಾಂಡಿಸ್ ತಲೆಮರೆಸಿಕೊಂಡಿದ್ದಾರೆ.