ರಾಮನಗರ :ಬೈಕ್ ಸವಾರನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೈಕ್ಗೆ ಕಾರು ಡಿಕ್ಕಿ ಹೊಡೆದು ಸವಾರ ಸಾವು; ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ - Ramnagar accident news
ಬೈಕ್ ಸವಾರನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆ
ರಾಮನಗರ ತಾಲೂಕಿನ ಹೆಗ್ಗಡಗೆರೆ ಪೆಟ್ರೋಲ್ ಬಂಕ್ ಮುಂಭಾಗ ಘಟನೆ ನಡೆದಿದ್ದು, ಬೈಕ್ನಲ್ಲಿ ಹೋಗುತ್ತಿದ್ದ ಯುವಕನಿಗೆ ಹಿಂದಿನಿಂದ ಬಂದ ಏಕಾಏಕಿ ಕಾರು ಡಿಕ್ಕಿ ಹೊಡಿದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಿಡದಿಯ ಚುಂಚ್ಕ ನಿವಾಸಿ ರಾಜು(40) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬೈಕ್ ಹಾಗೂ ಕಾರು ಸಂಪೂರ್ಣ ಜಖಂಗೊಂಡಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಡದಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.