ರಾಮನಗರ:ಕನಕಪುರ ಪಟ್ಟಣದ ನವಾಜಿಬಾರೆ ಬಡಾವಣೆಯ ಮನೆಯೊಂದರಲ್ಲಿ ಹತ್ತಕ್ಕೂ ಹೆಚ್ಚು ಮಂದಿಯನ್ನು ಕೆಲವು ಕ್ರೈಸ್ತ ಸಮುದಾಯದವರು ತಮ್ಮ ಧರ್ಮಕ್ಕೆ ಸೇರಿಸಿಕೊಳ್ಳಲು ಯತ್ನಿಸಿದ್ದಾರೆ. ಇದಕ್ಕಾಗಿ ಅವರನ್ನು ತಡರಾತ್ರಿ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಕನಕಪುರ ಟೌನ್ ಪೊಲೀಸರು 12 ಮಂದಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದರು. ಮಾಹಿತಿ ಕಲೆಹಾಕಿದ ಬಳಿಕ ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಸಚಿವ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸಿ, "ಮತಾಂತರ ತಡೆಯಲು ಕಾಯ್ದೆ ತರಲಾಗಿದೆ. ಧರ್ಮದ ಬದಲಾವಣೆಗೆ ಅವಕಾಶ ಕೊಡಬಾರದು. ಜನತೆಯ ಭಾವನೆಗೆ ಪೂರಕವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಆ ರೀತಿ ಮತಾಂತರದಲ್ಲಿ ತೊಡಗಿದ್ದರೆ ಕಾನೂನಿನ ಬಿಸಿ ಮುಟ್ಟಿಸಲಾಗುವುದು" ಎಂದರು.