ರಾಮನಗರ: ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಜಿಲ್ಲೆಯಲ್ಲಿ ಈ ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ. ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮದುವೆ, ಸಾರ್ವಜನಿಕ ಸಮಾರಂಭ, ಆಚರಣೆ, ಮನರಂಜನಾ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಸಂಭವವಿರುತ್ತದೆ. ಇದರಿಂದ ಸೋಂಕು ವ್ಯಾಪಕವಾಗಿ ಹರಡುವ ಸಾಧ್ಯತೆಗಳು ಹೆಚ್ಚು. ಸರ್ಕಾರದ ಆದೇಶದಲ್ಲಿ ನಿಗದಿಪಡಿಸಿರುವ ಜನಸಂಖ್ಯೆಯ ಗರಿಷ್ಠ ಮಿತಿಯನ್ನು ಮೀರದಂತೆ ಕ್ರಮ ವಹಿಸಬೇಕಾಗಿರುವುದರಿಂದ ಮತ್ತು ಸೋಂಕು ಹರಡದಂತೆ ತಡೆಯುವ ಸಲುವಾಗಿ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮದುವೆ ಮತ್ತು ಸಾರ್ವಜನಿಕ ಸಮಾರಂಭ, ಆಚರಣೆ, ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುನ್ನ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಅವರ ಪೂರ್ವಾನುಮತಿಯನ್ನು ಪಡೆದು ಆಯೋಜಕರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
ಸರ್ಕಾರದ ಆದೇಶದಲ್ಲಿ ನಿಗದಿಪಡಿಸಿರುವಷ್ಟು ಜನರಿಗೆ ಮಾತ್ರ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಂಬಂಧಪಟ್ಟ ತಹಶೀಲ್ದಾರ್ ಅವರು ಪಾಸ್ಗಳನ್ನು ವಿತರಿಸಲು ಕ್ರಮ ವಹಿಸಲಾಗುವುದು. ಮದುವೆ ಮತ್ತು ಸಾರ್ವಜನಿಕ ಸಮಾರಂಭ, ಆಚರಣೆ, ಮನರಂಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಸಮುದಾಯದ ಭವನ, ಕಲ್ಯಾಣ ಮಂಟಪ, ಸಭಾಂಗಣ ಸ್ಥಳಗಳ ಮಾಲೀಕರಿಂದ ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ, ರಾಜ್ಯ, ಜಿಲ್ಲಾಡಳಿತ ವತಿಯಿಂದ ಹೊರಡಿಸಿರುವ ಆದೇಶಗಳನ್ವಯ ಕ್ರಮ ವಹಿಸುವ ಬಗ್ಗೆ ದೃಢೀಕರಣ ಪತ್ರವನ್ನು ಪಡೆಯಲಾಗುವುದು. ಆದೇಶದಲ್ಲಿ ಸೂಚಿಸಿರುವ ಜನರ ಸಂಖ್ಯೆಯ ಮಿತಿಯನ್ನು ಮೀರದಂತೆ ಸಾರ್ವಜನಿಕರಿಗೆ ಅವಕಾಶ ನೀಡಲು ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಕೋವಿಡ್ ನಿಯಂತ್ರಣ ಕ್ರಮಗಳು: