ರಾಮನಗರ: ಕೋವಿಡ್ ಸೋಂಕಿತರು ಆಸ್ಪತ್ರೆಗೆ ದಾಖಲಾದ ನಂತರ ಸಂಬಂಧಿಕರು ಯಾವುದೇ ಕಾರಣಕ್ಕೂ ಆಸ್ಪತ್ರೆಯ ವಾರ್ಡ್ಗೆ ಸೋಂಕಿತರನ್ನು ನೋಡಲು ಬರಬಾರದು. ಇದಕ್ಕೆ ಸೂಕ್ತ ಬಂದೋಬಸ್ತ್ ಮಾಡುವಂತೆ ಉಸ್ತುವಾರಿ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೋವಿಡ್ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಉತ್ತಮ ಆಹಾರ, ಆಕ್ಸಿಜನ್ ಅವಶ್ಯಕತೆ ಇರುವವರಿಗೆ ಆಕ್ಸಿಜನ್ ಹಾಗೂ ಔಷಧ ಒದಗಿಸಿ. ಸೋಂಕಿತರ ಸಂಬಂಧಿಕರು ಸೋಂಕಿತರ ಸಂಪರ್ಕಕ್ಕೆ ಬಂದರೆ ಸೋಂಕು ಹರಡುತ್ತದೆ. ಈ ಹಿನ್ನೆಲೆ ಪ್ರತಿ ಆಸ್ಪತ್ರೆಗೂ ಹಾಗೂ ಕೋವಿಡ್ ಕೇರ್ ಸೆಂಟರ್‌ಗೆ ಅಗತ್ಯ ಪೊಲೀಸ್ ವ್ಯವಸ್ಥೆ ಮಾಡುವಂತೆ ತಿಳಿಸಿದರು.