ಮಾಗಡಿ (ರಾಮನಗರ):ಕಾಂಗ್ರೆಸ್ ಪಕ್ಷವೆಂದರೆ ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತ, ಭ್ರಷ್ಟಾಚಾರ. ಈ ಹಿನ್ನೆಲೆ ಕಾಂಗ್ರೆಸ್ ಮುಕ್ತ ಭಾರತದ ಗುರಿ ಸಾಧಿಸುವುದರ ಜೊತೆಯಲ್ಲಿ ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಮಾಡುವುದರಲ್ಲಿ ಬಿಜೆಪಿ ಯಶಸ್ವಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ನಾರಾಯಣ ಹೇಳಿದ್ದಾರೆ.
ಮಾಗಡಿಯಲ್ಲಿ ಬೆಳಗ್ಗೆ ಹಿರಿಯ ಮುಖಂಡ ಹೆಚ್.ಎಂ. ಕೃಷ್ಣಮೂರ್ತಿ ಅವರನ್ನು ಬಿಜೆಪಿಗೆ ಬರಮಾಡಿಕೊಂಡ ನಂತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ಅಭಿವೃದ್ಧಿಪರ ಕಾರ್ಯಕ್ರಮಗಳ ಪ್ರವಾಹದಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುತ್ತಿದೆ. ದೇಶದ ಜನರ ನಾಡಿಮಿತಕ್ಕೆ ತಕ್ಕಂತೆ ಬಿಜೆಪಿ ಕೆಲಸ ಮಾಡುತ್ತಿರುವ ಕಾರಣಕ್ಕಾಗಿಯೇ ದೇಶಾದ್ಯಂತ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ ಎಂದರು.
ಎಲ್ಲ ಹಂತಗಳಲ್ಲೂ ಭ್ರಷ್ಟಾಚಾರ ಬೇರೂರಿತ್ತು. ಅದನ್ನು ಈಗ ಬುಡಸಮೇತ ಕಿತ್ತೊಗೆಯಲಾಗುತ್ತಿದೆ. ಬಚ್ಚಿಟ್ಟಿದ್ದ ಕಪ್ಪು ಹಣ ರಾಶಿರಾಶಿಯಾಗಿ ಹೊರಬರುತ್ತಿದೆ. ದೇಶದ ಆರ್ಥಿಕತೆಯಲ್ಲಿ, ಜಾರಿಯಾಗುತ್ತಿರುವ ಯೋಜನೆಗಳಲ್ಲಿ ಪಾರದರ್ಶಕತೆ ಬಂದಿದೆ. ಈ ಕಾರಣದಿಂದ ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಜನರು ಕಾಂಗ್ರೆಸ್ ಬೆಂಗಲಿಗರನ್ನು ತಮ್ಮ ತಮ್ಮ ಗ್ರಾಮಗಳಿಂದ ಹೊರ ಹಾಕಲಿದ್ದಾರೆಂದು ಹೇಳಿದರು.
ಬಿಜೆಪಿ ಎಲ್ಲರ ಪಕ್ಷ: