ರಾಮನಗರ:ಸತ್ತ ವ್ಯಕ್ತಿಯೊಬ್ಬರ ಅಂತ್ಯಕ್ರಿಯೆ ವೇಳೆ ಕೋವಿಡ್-19 ಕಾನೂನು ಉಲ್ಲಂಘನೆ ಮಾಡಿರುವ ಸಂಬಂಧ ಪೊಲೀಸರು ಸುಮೊಟೋ ಕೇಸ್ ದಾಖಲು ಮಾಡಿದ್ದಾರೆ.
ಅಂತ್ಯಕ್ರಿಯೆ ವೇಳೆ ಕೋವಿಡ್ -19 ಕಾನೂನು ಉಲ್ಲಂಘನೆ: ಆರೋಪಿಗಳ ವಿರುದ್ಧ ದೂರು ದಾಖಲು - ಅಂತ್ಯಕ್ರಿಯೆ ವೇಳೆ ಕೋವಿಡ್-19 ಕಾನೂನು ಉಲ್ಲಂಘನೆ
ಕಳೆದ ಭಾನುವಾರ ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿ ಸಾವನ್ನಪ್ಪಿದ್ದರು. ಮೃತ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಸುಮಾರು 500ರಕ್ಕೂ ಅಧಿಕ ಮಂದಿ ಗುಂಪು -ಗುಂಪಾಗಿ ಭಾಗಿಯಾಗಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್ 188, 269, 270 ಅಡಿಯಲ್ಲಿ ದೂರು ದಾಖಲಿಸಲಾಗಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಸಾತನೂರು ಸರ್ಕಲ್ ಬಳಿಯ ಮುಸ್ಲಿಂ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತಿತ್ತು. ಈ ವೇಳೆ, ಕೋವಿಡ್-19 ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪವಿದೆ.
ಕಳೆದ ಭಾನುವಾರ ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿ ಸಾವನ್ನಪ್ಪಿದ್ದರು. ಮೃತ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಸುಮಾರು 500ರಕ್ಕೂ ಅಧಿಕ ಮಂದಿ ಗುಂಪು ಗುಂಪಾಗಿ ಭಾಗಿಯಾಗಿದ್ದರು. ಅಲ್ಲದೇ ಸಾಮಾಜಿಕ ಅಂತರ ಕಾಪಾಡದೇ, ಕೆಲವರು ಮಾಸ್ಕ್ ಧರಿಸದೇ, ಭಾಗಿಯಾಗಿದ್ದರು. ಈ ಸಂಬಂಧ ಸದ್ಯ ಪ್ರಕರಣ ದಾಖಲು ಮಾಡಿಕೊಂಡು ತನಿಖೆಗೆ ಮುಂದಾಗಿರುವ ಪೊಲೀಸರು ಸಂಬಂಧಿಸಿದವರ ವಿರುದ್ದ ಐಪಿಸಿ ಸೆಕ್ಷನ್ 188, 269, 270 ಅಡಿ ದೂರು ದಾಖಲು ಮಾಡಿದ್ದು, ತನಿಖೆ ನಡೆಸುತ್ತಿದ್ದಾರೆ.