ರಾಮನಗರ: ಕೋವಿಡ್ ನಿಯಮಾವಳಿ ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ ಕೈಗೊಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಸೇರಿದಂತೆ 41 ಮಂದಿ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
ನಿನ್ನೆ ದೊಡ್ಡ ಆಲಹಳ್ಳಿ ಗ್ರಾಮದಿಂದ ಕೊರೊನಾ ನಿಯಮಾವಳಿ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಇಂದು ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೋಮವಾರ ಸಿದ್ದರಾಮಯ್ಯ ಇಲ್ಲದ ಕಾರಣ ಎಫ್ಐಆರ್ನಲ್ಲಿ ಅವರ ಹೆಸರನ್ನು ಕೈಬಿಡಲಾಗಿದೆ.
ಡಿಕೆಶಿ ನೇತೃತ್ವದಲ್ಲಿ ಮೇಕೆದಾಟುನಿಂದ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಗೊಂಡು ಕೊರೊನಾ ನಿಯಮ ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ದೂರು ದಾಖಲಾಗಿದೆ. ಈ ಮೊದಲು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣೆಯಲ್ಲೇ ಮೊದಲ ಎಫ್‌ಐಆರ್ ದಾಖಲಾಗಿತ್ತು.