ರಾಮನಗರ :ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ಪಾದಯಾತ್ರೆ ಕೈಗೊಂಡಿದೆ. ಈ ಮಧ್ಯೆ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ಹಾಕಿರುವುದಕ್ಕೆ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಗರಂ ಆಗಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ನಾವು ಪಾದಯಾತ್ರೆ ಮಾಡುತ್ತಿರುವುದು ಸಿಎಂಗೆ ಗೊತ್ತಿತ್ತು. ಅಧಿಕಾರಿಗಳಿಗೂ ಗೊತ್ತು. ಅನುಮತಿ ಪಡೆದು ಪಾದಯಾತ್ರೆ ಮಾಡುತ್ತಿದ್ದೇವೆ. ಆದರೆ, ಇದೀಗ ಎಫ್ಐಆರ್ ದಾಖಲು ಮಾಡಿದ್ದಾರೆ. ರಾಜಕೀಯ ದ್ವೇಷದಿಂದ ಎಫ್ಐಆರ್ ದಾಖಲು ಮಾಡಿದ್ದಾರೆ ಎಂದು ಕಿಡಿಕಾರಿದರು.