ಕರ್ನಾಟಕ

karnataka

ETV Bharat / state

ಇದೇ ತಿಂಗಳ 27 ರಿಂದ ಮೇಕೆದಾಟು ಪಾದಯಾತ್ರೆ ಪುನಾರಂಭ : ಸಂಸದ ಡಿ. ಕೆ. ಸುರೇಶ್ - ಮೇಕೆದಾಟು ಪಾದಯಾತ್ರೆ ಕುರಿತು ಡಿ ಕೆ ಸುರೇಶ್ ಪ್ರತಿಕ್ರಿಯೆ

ಕಳೆದ ಬಾರಿ ಬಂದ ಜನರಿಗೆ ಆತಿಥ್ಯ ಮಾಡಿದ್ದೆವು. ಈಗಲೂ ಸಹ ಅದರ ಸಿದ್ಧತೆಗಾಗಿ ಸಭೆ ಮಾಡ್ತಿದ್ದೇವೆ. ಸಿಎಂ ದೆಹಲಿಗೆ ಬಂದಾಗ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿದ್ದೆ. ಅವರು ನಾವು ಮಾಡ್ತೇವೆ ಎಂದಿದ್ದರು. ಆದರೆ ಇದುವರೆಗೆ ಯಾವುದೇ ಚಕಾರ ಎತ್ತಿಲ್ಲ ಎಂದು ಸಂಸದ ಡಿ. ಕೆ. ಸುರೇಶ್ ಪ್ರತಿಕ್ರಿಯಿಸಿದ್ದಾರೆ.

d-k-suresh-spoke-about-mekedatu-project
ಸಂಸದ ಡಿ.ಕೆ ಸುರೇಶ್ ಮಾತನಾಡಿದರು

By

Published : Feb 20, 2022, 7:46 PM IST

ರಾಮನಗರ: ಇದೇ ತಿಂಗಳ 27 ರಿಂದ ಮೇಕೆದಾಟು ಪಾದಯಾತ್ರೆಯನ್ನು ಪುನಾರಂಭ ಮಾಡ್ತೇವೆ. ಅಂದು ಬೆಳಗ್ಗೆ 9 ಗಂಟೆಗೆ ರಾಮನಗರದಿಂದ ಪಾದಯಾತ್ರೆಯನ್ನು ಪ್ರಾರಂಭಿಸುತ್ತೇವೆ ಎಂದು 2ನೇ ಹಂತದ ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಸಂಸದ ಡಿ. ಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.

ಚನ್ನಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಪೂರ್ವಭಾವಿ ಸಭೆ ನಡೆಸಿ ಪಾದಯಾತ್ರೆ ಕುರಿತು ಡಿ. ಕೆ ಸುರೇಶ್ ಮಾತನಾಡಿ, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜ್ಯದ ಕೈ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ.

ಸಂಸದ ಡಿ.ಕೆ ಸುರೇಶ್ ಮಾತನಾಡಿದರು

ಮೊದಲ ದಿನ ರಾಮನಗರ - ಬಿಡದಿ 2ನೇ ದಿನ ಬಿಡದಿ - ಕೆಂಗೇರಿವರೆಗೆ ನಡೆಯಲಿದೆ. ಮೊದಲು ಬೆಂಗಳೂರಿನಲ್ಲೇ 5 ದಿನ ಪಾದಯಾತ್ರೆಗೆ ನಿರ್ಧರಿಸಿದ್ದೆವು. ಈಗ ಬಜೆಟ್ ಇರುವ ಕಾರಣ 3 ದಿನ ಬೆಂಗಳೂರಿನಲ್ಲಿ ಮಾಡ್ತೇವೆ. ಒಟ್ಟು 5 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ. ಬೆಂಗಳೂರಿನಲ್ಲಿಯೂ ಕೆಲ ಮಾರ್ಗ ಬದಲಾವಣೆ ಮಾಡ್ತೇವೆ ಎಂದು ತಿಳಿಸಿದರು.

ಕಳೆದ ಬಾರಿ ಬಂದ ಜನರಿಗೆ ಆತಿಥ್ಯ ಮಾಡಿದ್ದೆವು. ಈಗಲೂ ಸಹ ಅದರ ಸಿದ್ಧತೆಗಾಗಿ ಸಭೆ ಮಾಡ್ತಿದ್ದೇವೆ. ಸಿಎಂ ದೆಹಲಿಗೆ ಬಂದಾಗ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿದ್ದೆ. ಅವರು ಮಾಡ್ತೇವೆ ಎಂದಿದ್ದರು. ಆದರೆ, ಇದುವರೆಗೆ ಯಾವುದೇ ಚಕಾರ ಎತ್ತಿಲ್ಲ. ಅವರು ಕೇಂದ್ರ ಸರ್ಕಾರದ ಅನುಮತಿ ತರುವುದು ಅವರ ಜವಾಬ್ದಾರಿಯಾಗಿದೆ. ಹಾಗಾಗಿ, ಇವತ್ತು ರಾಜ್ಯ - ಕೇಂದ್ರ ಸರ್ಕಾರಕ್ಕೆ ಪಾದಯಾತ್ರೆ ಮೂಲಕ ಒತ್ತಾ ಮಾಡ್ತಿದ್ದೇವೆ ಎಂದರು.

ಯಾವುದೇ ಅಡೆತಡೆ ಬಂದರೂ ಸಹ ಪಾದಯಾತ್ರೆ ಮುಂದುವರೆಸುತ್ತೇವೆ. ಕೊರೊನಾ ಇತ್ತು ಎಂದು ನಾವು ಪಾದಯಾತ್ರೆ ಮೊಟಕು ಮಾಡಿದ್ದೆವು. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಮೊಟಕುಗೊಳಿಸಿದ್ದೆವು. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಬೆಂಬಲ ಸಿಗಲಿದೆ. ಬೆಂಗಳೂರಿನ ಜನರು ಈ ಪಾದಯಾತ್ರೆಗೆ ಪಕ್ಷಾತೀತವಾಗಿ ಬೆಂಬಲ ಕೊಡ್ತಾರೆ ಎಂದು ಅಭಿಪ್ರಾಯಪಟ್ಟರು.

ಇದಲ್ಲದೆ ಮಾಜಿ ಸಿಎಂ ಕುಮಾರಸ್ವಾಮಿಗೆ ನಯವಾಗಿ ಟಾಂಗ್ ಕೊಟ್ಟ ಡಿ. ಕೆ ಸುರೇಶ್, ಮೇಕೆದಾಟು ಪಾದಯಾತ್ರೆ ಬಗ್ಗೆ ಹೆಚ್​ಡಿಕೆ ವ್ಯಂಗ್ಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಮಾಜಿ ಪ್ರಧಾನಮಂತ್ರಿ ಕುಟುಂಬದವರು, ಅವರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಅವರಿಗಿರುವ ಬುದ್ಧಿ, ತಿಳುವಳಿಕೆ ಈ ರಾಜ್ಯದಲ್ಲಿ ಯಾರಿಗೂ ಇಲ್ಲ. ಅವರು ಏನು ಮಾತನಾಡಿದರೂ ಕೇಳಬೇಕಷ್ಟೇ, ಪ್ರಶ್ನೆ ಮಾಡಬಾರದು ಎಂದರು.

ರಾಜ್ಯಕ್ಕಾಗಿ, ರಾಷ್ಟ್ರಕ್ಕಾಗಿ ಏನ್ ಹೇಳ್ತಾರೋ ಕೇಳಬೇಕು. ಪ್ರಶ್ನೆ ಮಾಡಬಾರದು. ಇದರಲ್ಲಿ ಟೆಕ್ನಿಕಲ್ ಸಮಸ್ಯೆ ಏನು ಇಲ್ಲ. ಕೇಂದ್ರ ಸರ್ಕಾರ ಇಚ್ಛಾಶಕ್ತಿ ಪ್ರದರ್ಶನ ಮಾಡಬೇಕಿದೆ. ಇವತ್ತು ರಾಜ್ಯ - ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಇವತ್ತು ಎನ್ವಿರಾನ್ಮೆಂಟ್ ಕ್ಲಿಯರೆನ್ಸ್ ಕೊಡಲು ಅವಕಾಶ ಇರುವುದು ಕೇಂದ್ರ ಸರ್ಕಾರಕ್ಕೆ, ಕಾವೇರಿ ಪ್ರಾಧಿಕಾರ ರಚನೆಯಾಗಿದೆ. ಅದರಲ್ಲಿ ಕುಡಿಯುವ ನೀರಿನ ಯೋಜನೆ ಎಂದು ಕೇಂದ್ರ ಸರ್ಕಾರ ಅನುಮೋದನೆ ಕೊಡಬೇಕಿದೆ. ಎರಡೂ ಕಡೆ ಬಿಜೆಪಿ ಸರ್ಕಾರ ಇರುವುದರಿಂದ ಒತ್ತಡ ಹಾಕುತ್ತಿದ್ದೇವೆ. ಜನರ ಒತ್ತಾಯದ ಮುಂದೆ ಬೇರೆ ಏನು ಇಲ್ಲ. ಮಾಡಲೇಬೇಕಾಗುತ್ತೆ ಎಂದು ಚನ್ನಪಟ್ಟಣದ ಕೆಂಗಲ್ ಬಳಿ ಸಂಸದ ಡಿ.ಕೆ ಸುರೇಶ್ ತಿಳಿಸಿದ್ದಾರೆ.

ಓದಿ:ಪ್ರಧಾನಿ ನರೇಂದ್ರ ಮೋದಿ ಬಂದ ಮೇಲೆ ಹಿಂದೂ ಸನಾತನ ಧರ್ಮ ಪ್ರಚಾರಕ್ಕೆ ಬಂದಿದೆ: ವಚನಾನಂದ ಶ್ರೀ..

For All Latest Updates

TAGGED:

ABOUT THE AUTHOR

...view details