ರಾಮನಗರ/ವಿಜಯಪುರ:ರಾಮನಗರದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಹಾಗೂ ವಿಜಯಪುರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ತಾವೇ ಖುದ್ದು ಲಸಿಕೆ ಪಡೆಯುವ ಮೂಲಕ 2ನೇ ಹಂತದ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರಾಮನಗರ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಮಾತನಾಡಿ,ಕೋವಿಡ್ ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮವಿಲ್ಲ. ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಸರ್ಕಾರ ಫ್ರಂಟ್‌ಲೈನ್ ವಾರಿಯರ್ಸ್ಗೆ ಲಸಿಕೆ ನೀಡುತ್ತಿದ್ದು, ನೋಂದಣಿ ಮಾಡಿಕೊಂಡಿರುವ ಪ್ರತಿಯೊಬ್ಬರು ತಪ್ಪದೇ ಲಸಿಕೆ ಪಡೆದುಕೊಳ್ಳಿ ಎಂದರು.
ಕೋ-ಲಸಿಕೆ ಪಡೆದು ಮಾತನಾಡಿದ ಎಸ್ಪಿ ಅಗರವಾಲ್ ಲಸಿಕೆ ಪಡೆದು ಮಾತನಾಡಿದ ರಾಮನಗರ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಇಕ್ರಮ್, ನೋಂದಣಿ ಮಾಡಿಕೊಂಡವರು ಲಸಿಕೆ ನೀಡುವ ಸೈಟ್‌ಗೆ ಆಗಮಿಸಿದರೆ ಪಟ್ಟಿಯಲ್ಲಿ ಹೆಸರನ್ನು ಪರಿಶೀಲಿಸಿ 2 ನಿಮಿಷದಲ್ಲಿ ಲಸಿಕೆ ನೀಡಲಾಗುವುದು. ನಂತರ ಅರ್ಧ ಗಂಟೆ ಆರೋಗ್ಯ ಇಲಾಖೆಯವರು ನಿಗಾ ವಹಿಸುವರು. ಯಾವುದೇ ಅಡ್ಡ ಪರಿಣಾಮವಿಲ್ಲ ಎಂದು ಖಾತ್ರಿ ಪಡಿಸಿಕೊಂಡ ನಂತರ ಕಳುಹಿಸಿಕೊಡುತ್ತಾರೆ ಎಂದರು.
ಇನ್ನು ವಿಜಯಪುರದಲ್ಲಿ ಕೋವಿಡ್ ಲಸಿಕೆ ಜಾಗೃತಿ ಮೂಡಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ವಾಕ್ಸಿನ್ ಪಡೆದುಕೊಂಡರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ವಿಜಯಪುರದಲ್ಲಿ 1,800 ಪೊಲೀಸ್ ಸಿಬ್ಬಂದಿಗಳ ಹೆಸರು ನೋಂದಾಯಿಸಲಾಗಿದೆ. ಎಲ್ಲ ಸಿಬ್ಬಂದಿ ಲಸಿಕೆ ಪಡೆಯುವಂತೆ ಮನವಿ ಮಾಡಿದರು.
ನಾಳೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಹಾಗೂ ಜಿಪಂ ಸಿಇಒ ಸೇರಿದಂತೆ ಹಲವು ಅಧಿಕಾರಿಗಳು ಲಸಿಕೆ ಹಾಕಿಸಿಕೊಳ್ಳಲಿದ್ದಾರೆ. 2ನೇ ಹಂತದ ವಾಕ್ಸಿನ್ ಲಸಿಕಾ ಔಷಧಿಯನ್ನು ನಾಳೆಯಿಂದ ನಾಲ್ಕು ಇಲಾಖೆಯ ಕೊರೊನಾ ವಾರಿಯರ್ಸ್ಗೆ ನೀಡಲು ನಿರ್ಧರಿಸಲಾಗಿದೆ.