ರಾಮನಗರ:ಮೇ 23ರಂದು ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಗಾಗಿ ನಡೆಯುತ್ತಿರುವ ಸಿದ್ಧತೆಗಳನ್ನು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ರಾಜೇಂದ್ರ ಖುದ್ದು ವೀಕ್ಷಿಸಿದರು.
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಡಾ. ಕೆ. ರಾಜೇಂದ್ರ ಅವರು ಭೇಟಿ ನೀಡಿ, ಮತ ಯಂತ್ರಗಳನ್ನುಇರಿಸಿದ್ದ ಸ್ಟ್ರಾಂಗ್ರೂಂ ಮತ್ತು ಮತ ಎಣಿಕೆ ಕೇಂದ್ರವನ್ನು ಪರಿಶೀಲಿಸಿದರು.