ಕರ್ನಾಟಕ

karnataka

ETV Bharat / state

ಇನ್ನೆರಡು ತಿಂಗಳು ಜಿಲ್ಲಾಡಳಿತ ಮೈಮರೆಯಬಾರದು: ಅಧಿಕಾರಿಗಳಿಗೆ ಡಿಸಿಎಂ ಸೂಚನೆ

ಎಲ್ಲರೂ ಸೋಂಕು ಉಲ್ಬಣ ಆಗದ ರೀತಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡಬೇಕು. ಇನ್ನೆರಡು ತಿಂಗಳ ಕಾಲ ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳು, ಎಲ್ಲ ಇಲಾಖೆಗಳ ಅಧಿಕಾರಿಗಳೂ ಕೋವಿಡ್‌ ಕರ್ತವ್ಯದಲ್ಲೇ ತೊಡಗಿಸಿಕೊಳ್ಳಬೇಕು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಸಲಹೆ ನೀಡಿದರು.

Dcm ashwanth narayana meeting with ramanagar district officials
Dcm ashwanth narayana meeting with ramanagar district officials

By

Published : Apr 24, 2021, 9:30 PM IST

ರಾಮನಗರ:ಜಿಲ್ಲೆಯಲ್ಲಿ ಕೋವಿಡ್‌-19 ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೂ ಇನ್ನೆರಡು ತಿಂಗಳು ಜಿಲ್ಲಾಡಳಿತ ಮೈಮರೆಯಬಾರದು. ಎಲ್ಲ ಅಧಿಕಾರಿಗಳು ಕೋವಿಡ್‌ ಕರ್ತವ್ಯ ತಪ್ಪಿಸಿಕೊಳ್ಳಬಾರದು. ಒಂದು ವೇಳೆ ಉಪೇಕ್ಷಿಸಿದರೆ ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ಅಶ್ವತ್ಥ ನಾರಾಯಣ ಎಚ್ಚರಿಕೆ ನೀಡಿದರು.

ಅವರು ಜಿಲ್ಲೆಯ ಕೋವಿಡ್‌ ಪರಿಸ್ಥಿತಿಯ ಬಗ್ಗೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಉನ್ನತ ಅಧಿಕಾರಿಗಳು, ತಜ್ಞರ ಜತೆ ವರ್ಚುಯಲ್‌ ಮೂಲಕ ಸಭೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿ, ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುವ ಎಲ್ಲ ಕೋವಿಡ್‌ ವಾರಿಯರ್‌ಗಳಿಗೆ ಮೊದಲ ಹಂತದಲ್ಲೇ ಲಸಿಕೆ ನೀಡಲಾಗಿದೆ. ಹೀಗಾಗಿ ಜೀವಕ್ಕೆ ಅಪಾಯವಿಲ್ಲ ಎಂದ ಅವರು, ಈಗ ಜನರ ಜೀವಕ್ಕಿಂತ ದೊಡ್ಡ ವಿಷಯ ಬೇರೆ ಇಲ್ಲ ಎಂದರು.

ಎಲ್ಲರೂ ಸೋಂಕು ಉಲ್ಬಣ ಆಗದ ರೀತಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡಬೇಕು. ಇನ್ನೆರಡು ತಿಂಗಳ ಕಾಲ ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳು, ಎಲ್ಲ ಇಲಾಖೆಗಳ ಅಧಿಕಾರಿಗಳೂ ಕೋವಿಡ್‌ ಕರ್ತವ್ಯದಲ್ಲೇ ತೊಡಗಿಸಿಕೊಳ್ಳಬೇಕು ಎಂದು ಡಿಸಿಎಂ ಸಲಹೆ ನೀಡಿದರು.

ಸದಾ ಕಾಲ ಯಾರಿಂದಲೇ ಮೊಬೈಲ್‌ ಕರೆ ಬಂದರೆ ಸ್ವೀಕರಿಸಿ ಕ್ರಮ ಕೈಗೊಳ್ಳಬೇಕು. ಯಾರು ಕರೆ ಸ್ವೀಕರಿಸುವುದಿಲ್ಲವೋ ಅಂತಹ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ಕೊಟ್ಟರು.

ಬೆಡ್‌ಗಳ ಸಮಸ್ಯೆ ಇಲ್ಲ

ಈಗ ರಾಮನಗರದಲ್ಲಿ 400 ಕೋವಿಡ್‌ ಹಾಸಿಗೆಗಳಿವೆ. ಜತೆಗೆ, ಪ್ರತಿ ತಾಲೂಕಿನಲ್ಲಿ ತಲಾ ನೂರು ಕೋವಿಡ್‌ ಕೇರ್‌ ಸೆಂಟರ್‌ಗಳಿವೆ. ಪ್ರತಿ ತಾಲೂಕು ಆಸ್ಪತ್ರೆಯಲ್ಲೂ ತಲಾ 100 ಹಾಸಿಗೆಗಳಿವೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಯಲ್ಲಿ 200 ಹಾಸಿಗೆಗಳಿವೆ. ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ 600 ಬೆಡ್‌ ಇದೆ. ದಯಾನಂದ್‌ ಸಾಗರ್‌ ಆಸ್ಪತ್ರೆಯಲ್ಲಿ 100 ಬೆಡ್‌ ಕೊಟ್ಟಿದ್ದಾರೆ. ಅಲ್ಲಿ ಇನ್ನೂ 500 ಬೆಡ್‌ ಪಡೆಯುವ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ. ಇನ್ನು ಹೆಚ್ಚು ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಮಾಡಲಾಗುತ್ತಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಬೇಗ ಪರೀಕ್ಷೆ, ಕ್ಷಿಪ್ರ ಫಲಿತಾಂಶ, ತಕ್ಷಣ ಚಿಕಿತ್ಸೆ

ಪ್ರಾಥಮಿಕ ಹಂತದಲ್ಲಿಯೇ ಕೋವಿಡ್‌ ಹತ್ತಿಕ್ಕಲು ಮೂರು ಸೂತ್ರಗಳನ್ನು ಪಾಲಿಸಲಾಗುತ್ತಿದೆ. ಯಾವುದೇ ರೋಗ ಲಕ್ಷಣ ಇದ್ದರೆ ತಡ ಮಾಡದೇ ಬೇಗ ಪರೀಕ್ಷೆ ಮಾಡಿಸಿಕೊಳ್ಳುವುದು, ಕ್ಷಿಪ್ರವಾಗಿ ಫಲಿತಾಂಶ ಕೊಡುವುದು ಹಾಗೂ ರಿಸಲ್ಟ್‌ ಬಂದ ಕೂಡಲೇ ಒಂದು ಕ್ಷಣವನ್ನೂ ವ್ಯರ್ಥ ಮಾಡದೇ ತಕ್ಷಣ ಚಿಕಿತ್ಸೆ ಆರಂಭಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.

ಸೋಂಕಿಗೆ ಒಳಗಾದವರು ಸುಲಭವಾಗಿ, ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯಬೇಕು. ಸುಲಭ-ಸರಳವಾಗಿ ಸೋಂಕನ್ನು ತಡೆಗಟ್ಟಬಹುದು. ಉಲ್ಬಣವಾಗುವುದಕ್ಕೆ ಬಿಡಬಾರದು. ಚಿಕಿತ್ಸೆ ಪಡೆದುಕೊಂಡರೆ ವಾರದಲ್ಲೇ ಗುಣಮುಖರಾಗಬಹುದು. ಉಲ್ಬಣವಾದರೆ ಉಸಿರಾಟ ಸಮಸ್ಯೆ ಉಂಟಾಗುತ್ತಿದೆ. ಹೀಗಾಗಿ ಆರಂಭಿಕ ಹಂತದಲ್ಲಿಯೇ ಆರಂಭಿಕ ಲಕ್ಷಣಗಳಿದ್ದಾಗಲೇ ರೋಗನಿರೋಧಕ ಚಿಕಿತ್ಸೆ ನೀಡಲೇಬೇಕು. ಇದನ್ನೇ ನಾನು ಜಿಲ್ಲಾಡಳಿತಕ್ಕೂ ಸೂಚಿಸಿದ್ದೇನೆ ಎಂದರು.

ABOUT THE AUTHOR

...view details