ರಾಮನಗರ: ಕೋವಿಡ್-19 ಸೋಂಕಿನ ನಿರ್ವಹಣೆಯನ್ನು ಜಿಲ್ಲಾಡಳಿತ ಉತ್ತಮವಾಗಿ ನಿರ್ವಹಣೆ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಜಿಲ್ಲೆಯಲ್ಲಿನ ಕೊರೊನಾ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಾಕಷ್ಟು ತಯಾರಿ ಮಾಡಿಕೊಂಡಿದೆ. ಆದರೂ ಮುಂದಿನ ದಿನಗಳನ್ನು ಗಮನದಲ್ಲಿಟ್ಟುಕೊಂಡು ಇನ್ನೂ ಅನೇಕ ರೀತಿಯ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿಗಳು ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಆಸ್ಪತ್ರೆಗಳೊಂದಿಗೆ ಒಪ್ಪಂದ:
ಜಿಲ್ಲೆಯ ಕೋವಿಡ್ ರೋಗಿಗಳು ಚಿಕಿತ್ಸೆಗಾಗಿ ಬೆಂಗಳೂರಿನ ಕೆಂಗೇರಿ ಸಮೀಪದಲ್ಲಿರುವ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಕನಕಪುರದ ಹಾರೋಹಳ್ಳಿ ಸಮೀಪದ ದಯಾನಂದ್ ಸಾಗರ್ ಆಸ್ಪತ್ರೆಗಳೊಂದಿಗೆ ಜಿಲ್ಲಾಡಳಿತವು ಒಪ್ಪಂದ ಮಾಡಿಕೊಳ್ಳುತ್ತಿದೆ. ಒಪ್ಪಂದದಂತೆ ಮುಂದಿನ 10, 20 ಮತ್ತು 30 ದಿನಗಳಿಗೆ ಅಗತ್ಯವಾಗುವ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಹಾಸಿಗೆಗಳನ್ನು ಕಾಯ್ದಿರಿಸಿಕೊಳ್ಳುವಂತೆ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಹಾಯ ಕೇಂದ್ರ: