ರಾಮನಗರ: ಜಲ ಜೀವನ್ ಮಿಷನ್ ಯೋಜನೆಯಡಿ ಮಳೂರು ಗ್ರಾಮ ಪಂಚಾಯಿತಿಯ ವಾಲೇತೋಪು ಗ್ರಾಮದಲ್ಲಿ 11.70 ಲಕ್ಷ ರೂ. ವೆಚ್ಚದಲ್ಲಿ ಓವರ್ ಹೆಡ್ ಟ್ಯಾಂಕ್ ಹಾಗೂ 31 ಮನೆಗಳಿಗೆ ಪೈಪ್ ಲೈನ್ ಹಾಗೂ ನಳ ವ್ಯವಸ್ಥೆ ಒದಗಿಸುವ ಕಾಮಗಾರಿಗೆ ಡಿಸಿಎಂ, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವಥ್ ನಾರಾಯಣ ಶಂಕುಸ್ಥಾಪನೆ ನೆರವೇರಿಸಿದರು.
ಓವರ್ ಹೆಡ್ ಟ್ಯಾಂಕ್ ಕಾಮಗಾರಿಗೆ ಡಿಸಿಎಂ ಅಶ್ವಥ್ ನಾರಾಯಣ ಶಂಕುಸ್ಥಾಪನೆ - ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವಥ್ ನಾರಾಯಣ
11.70 ಲಕ್ಷ ರೂ. ವೆಚ್ಚದಲ್ಲಿ ಓವರ್ ಹೆಡ್ ಟ್ಯಾಂಕ್ ಹಾಗೂ 31 ಮನೆಗಳಿಗೆ ಪೈಪ್ ಲೈನ್ ಹಾಗೂ ನಳ ವ್ಯವಸ್ಥೆ ಒದಗಿಸುವ ಕಾಮಗಾರಿಗೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವಥ್ ನಾರಾಯಣ ಶಂಕುಸ್ಥಾಪನೆ ನೆರವೇರಿಸಿದರು.
![ಓವರ್ ಹೆಡ್ ಟ್ಯಾಂಕ್ ಕಾಮಗಾರಿಗೆ ಡಿಸಿಎಂ ಅಶ್ವಥ್ ನಾರಾಯಣ ಶಂಕುಸ್ಥಾಪನೆ Ramnagar](https://etvbharatimages.akamaized.net/etvbharat/prod-images/768-512-11322117-227-11322117-1617845066000.jpg)
ಶಂಕುಸ್ಥಾಪನೆ ನೆರವೇರಿಸಿದ ಡಿಸಿಎಂ ಅಶ್ವಥ್ ನಾರಾಯಣ
ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕ ಆಸ್ತಿಯನ್ನು ತಮ್ಮ ಸ್ವಂತ ಆಸ್ತಿಯಂತೆ ಕಾಪಾಡಿಕೊಳ್ಳಿ. ಸರ್ಕಾರ ಸಾರ್ವಜನಿಕರ ಅನುಕೂಲಕ್ಕಾಗಿ ಕೋಟ್ಯಂತರ ರೂ. ವೆಚ್ಚ ಮಾಡಿ ಯೋಜನೆ ರೂಪಿಸುತ್ತದೆ. ಅವುಗಳನ್ನು ಕಾಪಾಡಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿ ಎಂದರು.
ಗ್ರಾಮೀಣ ಭಾಗದಲ್ಲಿ ಮನ್ರೇಗಾ ಯೋಜನೆಯಡಿ ರಸ್ತೆ ಅಭಿವೃದ್ದಿ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಬಹುದು, ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.