ರಾಮನಗರ: ರಾಮನಗರದಿಂದ ಆ್ಯಂಬುಲೆನ್ಸ್ನಲ್ಲಿ ಬರುವ ರೋಗಿಗಳನ್ನು ತಕ್ಷಣವೇ ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು. ವಿಳಂಬ ಧೋರಣೆ ಸಹಿಸಲು ಅಸಾಧ್ಯ. ತಪ್ಪಿದಲ್ಲಿ ಕ್ರಮಕ್ಕೆ ಮುಂದಾಗುವುದಾಗಿ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಆಸ್ಪತ್ರೆಗೆ ಎಚ್ಚರಿಕೆ ನೀಡಿದ್ದಾರೆ.
ಡಿಸಿಎಂ ಅಶ್ವತ್ಥ್ ನಾರಾಯಣ ವಿಡಿಯೋ ಕಾನ್ಫ್ರೆನ್ಸ್ ಜಿಲ್ಲಾಡಳಿತದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಬೆಂಗಳೂರಿನ ಕೆಂಗೇರಿ ಸಮೀಪದಲ್ಲಿರುವ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ರಾಮನಗರದ ರೋಗಿಗಳಿಗೆ 300 ಹಾಸಿಗೆಗಳನ್ನು ಒದಗಿಸುವುದಾಗಿ ತಿಳಿಸಿತ್ತು. ಈ ಬಗ್ಗೆ ಖುದ್ದಾಗಿ ಮುತುವರ್ಜಿ ವಹಿಸಿದ್ದ ಉಪ ಮುಖ್ಯಮಂತ್ರಿಗಳು, ಆಸ್ಪತ್ರೆಯ ಮುಖ್ಯಸ್ಥ ನವೀನ್ ಅವರೊಂದಿಗೆ ಮಾತುಕತೆ ನಡೆಸಿದ್ದರು.
ಖುದ್ದು ಮಾತುಕತೆ: ಆಸ್ಪತ್ರೆಯ ಮುಖ್ಯಸ್ಥ ನವೀನ್ ಅವರೊಂದಿಗೆ ಈ ಬಗ್ಗೆ ಖುದ್ದಾಗಿ ಮಾತನಾಡಿ ಗಮನ ಸೆಳೆಯುವುದಾಗಿ ತಿಳಿಸಿದ ಉಪ ಮುಖ್ಯಮಂತ್ರಿಗಳು, ಜಿಲ್ಲಾಡಳಿತವು ಸಹ ಈ ಬಗ್ಗೆ ವಿವರವಾದ ಪತ್ರವನ್ನು ಬರೆದು ಆಸ್ಪತ್ರೆಗೆ ಎಚ್ಚರಿಕೆ ನೀಡುವಂತೆ ಸೂಚಿಸಿದರು.
ಡಿಸಿಎಂ ಅಶ್ವತ್ಥ್ ನಾರಾಯಣ ವಿಡಿಯೋ ಕಾನ್ಫ್ರೆನ್ಸ್ ವರದಿ ನೀಡಲು ಸೂಚನೆ:ಪ್ರಸಕ್ತ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ 51 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ರೋಗಿಗಳನ್ನು ರಾಮನಗರದ ವೈದ್ಯಾಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ವೈಯಕ್ತಿಕವಾಗಿ ಅವರಿಂದ ಮಾಹಿತಿ ಪಡೆದುಕೊಂಡು ಅಲ್ಲಿರುವ ಸೌಲಭ್ಯ ಮತ್ತು ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ವರದಿ ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.
ಜಿಲ್ಲಾಡಳಿತದೊಂದಿಗೆ ಮಾಡಿಕೊಂಡಿರುವ ಒಪ್ಪಂದದಂತೆ ವೈದ್ಯಕೀಯ ಕಾಲೇಜು 15 ವೆಂಟಿಲೇಟರ್ ಮತ್ತು 30 ಐಸಿಯು ವಾರ್ಡ್ಗಳನ್ನು ನೀಡಬೇಕಾಗಿರುತ್ತದೆ. ಇವುಗಳ ಬಗ್ಗೆಯೂ ಪರೀಕ್ಷಿಸಿ ವರದಿ ನೀಡುವಂತೆ ತಿಳಿಸಿದರು.