ಕರ್ನಾಟಕ

karnataka

ರಾಮನಗರ ನಗರಸಭೆ ಚುನಾವಣೆ ಹಿನ್ನೆಲೆ ಮುಖಂಡರ ಜೊತೆ ಡಿಸಿಎಂ ಸಭೆ

By

Published : Apr 7, 2021, 7:21 PM IST

ಈ ಬಾರಿ ರಾಮನಗರ ನಗರಸಭೆಯಲ್ಲಿ ಪಕ್ಷ ಅಧಿಕಾರ ಹಿಡಿಯಲೇಬೇಕು. ಅದಕ್ಕೆ ಪೂರಕವಾಗಿ ಎಲ್ಲರೂ ಒಟ್ಟಿಗೆ ಕೆಲಸ ಮಾಡಬೇಕು. ಇದೇ 27ರಂದು ಚುನಾವಣೆ ನಡೆಯಲಿದ್ದು, ಪ್ರತಿಯೊಬ್ಬರು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಅಶ್ವತ್ಥ ನಾರಾಯಣ ಕಿವಿಮಾತು ಹೇಳಿದರು.

Dcm
Dcm

ರಾಮನಗರ: ನಗರಸಭೆ ಚುನಾವಣೆಯಲ್ಲಿ ಪಕ್ಷದ ಜಿಲ್ಲಾ ಮುಖಂಡರು, ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ಅಶ್ವತ್ಥ ನಾರಾಯಣ ಹೇಳಿದರು.

ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿ ಜಿಲ್ಲಾ ಮುಖಂಡರ ಸಭೆ ನಡೆಸಿದ ಡಿಸಿಎಂ, ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ ಇತ್ಯಾದಿ ಅಂಶಗಳ ಬಗ್ಗೆ ಖಡಕ್‌ ಕ್ಲಾಸ್‌ ಕೊಟ್ಟರು.

ಈ ಬಾರಿ ರಾಮನಗರ ನಗರಸಭೆಯಲ್ಲಿ ಪಕ್ಷ ಅಧಿಕಾರ ಹಿಡಿಯಲೇಬೇಕು. ಅದಕ್ಕೆ ಪೂರಕವಾಗಿ ಎಲ್ಲರೂ ಒಟ್ಟಿಗೆ ಕೆಲಸ ಮಾಡಬೇಕು. ಇದೇ 27ರಂದು ಚುನಾವಣೆ ನಡೆಯಲಿದ್ದು, ಪ್ರತಿಯೊಬ್ಬರು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಕಾಂಗ್ರೆಸ್‌, ಜೆಡಿಎಸ್‌ ಕಾಲದಲ್ಲಿ ಆಗಿದ್ದಂತೆ ಅಭಿವೃದ್ಧಿ ಕೆಲಸಗಳು ಕೇವಲ ಕಾಗದದ ಮೇಲೆ ಮಾತ್ರ ಇಲ್ಲ. ನೈಜವಾಗಿ ಕಾರ್ಯಗತವಾಗಿ ಜನರಿಗೆ ಕಾಣುತ್ತಿವೆ. ಈ ಅಂಶಗಳನ್ನು ಜನತೆಗೆ ಮನವರಿಕೆ ಮಾಡಿಕೊಟ್ಟು ಮತ ಕೇಳಬೇಕು ಎಂದು ಮುಖಂಡರಿಗೆ ಡಿಸಿಎಂ ಸೂಚಿಸಿದರು.

ರಾಮನಗರವೂ ಸೇರಿದಂತೆ ಇಡೀ ಜಿಲ್ಲೆಗೆ ನದಿ ಮೂಲಗಳಿಂದ ಕುಡಿಯುವ ನೀರು ಸರಬರಾಜು ಮಾಡುವುದಿರಬಹುದು, ರಾಮನಗರದ ಅಭವೃದ್ಧಿಗೆ ರೂಪಿಸಿರುವ ವಿವಿಧ ಯೋಜನೆಗಳು ಸೇರಿದಂತೆ ಎಲ್ಲ ಅಂಶಗಳನ್ನು ಜನರಿಗೆ ತಿಳಿಸಬೇಕು ಎಂದರು.

ABOUT THE AUTHOR

...view details