ರಾಮನಗರ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಪ್ರಕರಣ ಚನ್ನಪಟ್ಟಣದಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ತೋಟನಹಳ್ಳಿ ಗ್ರಾಮಕ್ಕೆ ಸ್ನೇಹಿತರ ಜೊತೆ ಆಗಮಿಸಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಕೃಷಿ ಹೊಂಡದಲ್ಲಿ ಈಜಲು ಹೋದ ಇಬ್ಬರು ಯುವಕರು ಸಾವು - ಇಬ್ಬರ ಮರಣ
ಇಬ್ಬರು ಯುವಕರು ಕೃಷಿ ಹೊಂಡದಲ್ಲಿ ಈಜಲು ಹೋಗಿ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ. ಯುವಕರು ಬೆಂಗಳೂರು ಮೂಲದವರಾಗಿದ್ದಾರೆ.
ಕೃಷಿ ಹೊಂಡದಲ್ಲಿ ಈಜಲು ಹೋದ ಇಬ್ಬರ ಮರಣ
ಬೆಂಗಳೂರಿನವರಾದ 20 ವರ್ಷದ ಸುಕೇಶ್ ಕುಮಾರ್, 25 ವರ್ಷದ ಹರೀಶ್ ಮೃತರು. 6 ಜನ ಸ್ನೇಹಿತರ ಜೊತೆಗೂಡಿ ಈ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಮೃತಪಟ್ಟಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ:ಚಿತ್ರದುರ್ಗ: ಅಪ್ರಾಪ್ತೆ ಮೇಲೆ ಪತಿ ಹಾಗೂ ಆತನ ಮೂವರು ಸ್ನೇಹಿತರಿಂದ ಗ್ಯಾಂಗ್ರೇಪ್