ರಾಮನಗರ :ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಆಚರಣೆಗೆ ಕಾಲ್ನಡಿಗೆ ಮೂಲಕ ಮಹಾದೇಶ್ವರ ಬೆಟ್ಟಕ್ಕೆ ಕನಕಪುರ ತಾಲೂಕಿನ ಸಂಗಮ ಮಾರ್ಗವಾಗಿ ತೆರಳುತ್ತಿದ್ದ ಭಕ್ತರು ಕಾವೇರಿ ನದಿ ದಾಟುವ ವೇಳೆ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗುತ್ತಿರುವ ಶಂಕಾಸ್ಪದ ಘಟನೆ ಬೊಮ್ಮಸಂದ್ರದ ಬಳಿ ನಡೆದಿದೆ. ಹಲವರನ್ನು ರಕ್ಷಿಸಿದ್ದು ಇನ್ನೂ ಹಲವು ಭಕ್ತರು ನದಿಯಲ್ಲಿ ಕೊಚ್ಚಿ ಹೋಗಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ.
ರಾಮನಗರ ಜಿಲ್ಲೆ ಸೇರಿದಂತೆ ಬೆಂಗಳೂರಿನ ನಾನಾ ಭಾಗದಿಂದ ಸಾವಿರಾರು ಭಕ್ತರು ಮಹಾದೇಶ್ವರಸ್ವಾಮಿ ಭಕ್ತರು ಕಾಲ್ನಡಿಗೆ ಮೂಲಕ ಆಗಮಿಸಿ, ಕನಕಪುರ, ದೊಡ್ಡ ಆಲಹಳ್ಳಿ, ಏಳಗಳ್ಳಿ, ಹೆಗ್ಗನೂರು, ಕುಪ್ಪೆದೊಡ್ಡಿ ಮಾರ್ಗವಾಗಿ ಸಂಗಮ ಬಳಿಯ ಬೊಮ್ಮಸಂದ್ರ ಬಳಿ ಕಾವೇರಿ ನದಿ ದಾಟಿಕೊಂಡು ಮಹಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೋಗುತ್ತಿದ್ದರು. ಹಲವು ವರ್ಷಗಳಿಂದ ಈ ಪದ್ಧತಿ ನಡೆದುಕೊಂಡು ಬಂದಿದೆ.