ರಾಮನಗರ:ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಗುರುವಾರ ಕೊರೊನಾಗೆ ಬಲಿಯಾಗಿದ್ದರು. ಇಂದು ಫಲಿತಾಂಶ ಹೊರ ಬಂದಿದ್ದು, ಮೃತ ಅಭ್ಯರ್ಥಿ ಬಹುಮತದೊಂದಿಗೆ ಗೆಲುವು ಸಾಧಿಸಿದ್ದಾರೆ.
ನಗರಸಭೆಯ 4ನೇ ವಾರ್ಡ್ನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಲೀಲಾ ಗೋವಿಂದರಾಜುಗೆ ಇತ್ತೀಚೆಗೆ ಸೋಂಕು ಕಾಣಿಸಿಕೊಂಡಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.