ರಾಮನಗರ:ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿದ ಬಳಿಕ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರೀಕ್ಷೆ ಮುಗಿದ ಬಳಿಕ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ - ಕರ್ನಾಟಕ ಎಸ್ಸೆಸ್ಸೆಲ್ಸಿ ಪರೀಕ್ಷೆ
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸಿದ್ದೇವೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಹೇಳಿದರು.
ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ
ಇಂದು ನಡೆದ ಇಂಗ್ಲಿಷ್ ಭಾಷೆ ಪರೀಕ್ಷೆಗೆ 12,795 ಮಂದಿ ಪೈಕಿ 12,302 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 493 ಮಂದಿ ಪರೀಕ್ಷೆಗೆ ಗೈರಾಗಿದ್ದರು. 54 ವಿದ್ಯಾರ್ಥಿಗಳು ಹೊರ ಜಿಲ್ಲೆಗಳಿಂದ ಬಂದಿದ್ದರು.
ಕಂಟೈನ್ಮೆಂಟ್ ಝೋನ್ ಪ್ರದೇಶದಿಂದ 34 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಅನಾರೋಗ್ಯದ ಹಿನ್ನೆಲೆಯಲ್ಲಿ 3 ಮಂದಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗಿದೆ ಎಂದು ಅವರು ತಿಳಿಸಿದರು.