ರಾಮನಗರ : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಿ.ಕೆ.ಸುರೇಶ್, ಶಾಸಕಿ ಅನಿತಾ ಕುಮಾರಸ್ವಾಮಿ ಜೊತೆಗೂಡಿ ಮತಯಾಚನೆ ನಡೆಸುತ್ತಿದ್ದಾರೆ.
ರಾಮನಗರದಲ್ಲಿ ಡಿ.ಕೆ.ಸುರೇಶ್, ಶಾಸಕಿ ಅನಿತಾ ಕುಮಾರಸ್ವಾಮಿ ಜಂಟಿ ಪ್ರಚಾರ - undefined
ರಾಜ್ಯದಲ್ಲಿ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತಿದ್ದಾರೆ. ಇತ್ತ ರಾಮನಗರಲ್ಲೂ ಕೂಡ ಮೈತ್ರಿ ಅಭ್ಯರ್ಥಿ ಪರ ಉಭಯ ಪಕ್ಷದಿಂದ ಜಂಟಿಯಾಗಿ ಪ್ರಚಾರ ನಡೆಸಲಾಗುತ್ತಿದೆ.
![ರಾಮನಗರದಲ್ಲಿ ಡಿ.ಕೆ.ಸುರೇಶ್, ಶಾಸಕಿ ಅನಿತಾ ಕುಮಾರಸ್ವಾಮಿ ಜಂಟಿ ಪ್ರಚಾರ](https://etvbharatimages.akamaized.net/etvbharat/images/768-512-2888850-599-f8907aa8-4f83-4405-ae9d-f2d4f0a161ad.jpg)
ಡಿ.ಕೆ.ಸುರೇಶ್, ಶಾಸಕಿ ಅನಿತಾ ಕುಮಾರಸ್ವಾಮಿ ಜಂಟಿ ಪ್ರಚಾರ
ಡಿ.ಕೆ.ಸುರೇಶ್, ಶಾಸಕಿ ಅನಿತಾ ಕುಮಾರಸ್ವಾಮಿ ಜಂಟಿ ಪ್ರಚಾರ
ರಾಮನಗರ ವಿಧಾನಸಭೆ ಕ್ಷೇತ್ರದ ಮರಳುವಾಡಿ ಹೋಬಳಿ ವ್ಯಾಪ್ತಿಯಲ್ಲಿ ಮತಪ್ರಚಾರ ನಡೆಸುತ್ತಿರುವ ಡಿ.ಕೆ.ಸುರೇಶ್, ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಮರಳವಾಡಿ ಹೋಬಳಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಆತ್ಮೀಯವಾಗಿ ಬರಮಾಡಿಕೊಳ್ಳುತ್ತಿದ್ದಾರೆ. ಮೈತ್ರಿ ಅಭ್ಯರ್ಥಿಗೆ ಜೆಡಿಎಸ್ ಕಾರ್ಯಕರ್ತರಿಂದಲೂ ಬೆಂಬಲ ವ್ಯಕ್ತವಾಗಿದ್ದು, ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಪ್ರಚಾರ ಸಭೆ, ಸಮಾರಂಭಗಳು ನಡೆಯಲಿವೆ.