ಕರ್ನಾಟಕ

karnataka

ETV Bharat / state

ಕನಕಪುರದಲ್ಲಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ: ಅಚ್ಚರಿಗೆ ಕಾರಣವಾದ ಕಾಂಗ್ರೆಸ್‌ ನಡೆ - ಕನಕಪುರದಲ್ಲಿ ಡಿ ಕೆ ಸುರೇಶ್ ನಾಮಪತ್ರ ಸಲ್ಲಿಕೆ

ಸಂಸದ ಡಿ.ಕೆ.ಸುರೇಶ್​ ಅವರು ತಮ್ಮ ಉಮೇದುವಾರಿಕೆಯನ್ನು ಕನಕಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗೆ ಸಲ್ಲಿಸಿದ್ದಾರೆ.

ಕನಕಪುರದಲ್ಲಿ ಡಿ ಕೆ ಸುರೇಶ್ ನಾಮಪತ್ರ ಸಲ್ಲಿಕೆ
ಕನಕಪುರದಲ್ಲಿ ಡಿ ಕೆ ಸುರೇಶ್ ನಾಮಪತ್ರ ಸಲ್ಲಿಕೆ

By

Published : Apr 20, 2023, 3:59 PM IST

Updated : Apr 20, 2023, 7:16 PM IST

ರಾಮನಗರ :ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಗೆ ಇರುವ ಗಡುವು ಇಂದೇ ಕೊನೆಯಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಹಾಗೂ ಬಿಜೆಪಿ ತಮ್ಮ ಕೊನೆಯ ಕ್ಷಣಗಳ ತಂತ್ರಗಾರಿಕೆ ನಡೆಸುತ್ತಿವೆ. ಅಚ್ಚರಿ ಎಂಬಂತೆ ಕನಕಪುರದಲ್ಲಿ ಕಾಂಗ್ರೆಸ್ ಡಿ.ಕೆ.ಸುರೇಶ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆಯ ದಿನವಾಗಿದ್ದು ಡಿ.ಕೆ.ಸುರೇಶ್ ತಮ್ಮ ಉಮೇದುವಾರಿಕೆಯನ್ನು ಕನಕಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಂತೋಷ್ ಅವರಿಗೆ ಸಲ್ಲಿಸಿದರು.

ಇದನ್ನೂ ಓದಿ:ವಿಪಕ್ಷ ನಾಯಕ ಸಿದ್ದರಾಮಯ್ಯ ಆಸ್ತಿ ವಿವರ ಘೋಷಣೆ ; ಮಾಜಿ ಸಿಎಂ ಗಿಂತ ಅವರ ಪತ್ನಿಯೇ ಶ್ರೀಮಂತೆ!

ಏಪ್ರಿಲ್ 17 ರಂದು ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದರು. ಆದರೆ ಅವರ ನಾಮಪತ್ರ ತಿರಸ್ಕೃತಗೊಳ್ಳುವ ಮಾತುಗಳು ಕೇಳಿಬಂದಿದ್ದು ಮುನ್ನೆಚ್ಚರಿಕೆ ವಹಿಸಿ ಸಹೋದರ ಡಿ.ಕೆ.ಸುರೇಶ್ ಅವರಿಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಡಿ.ಕೆ.ಶಿವಕುಮಾರ್ ಇಂದು 1 ಗಂಟೆಯವರೆಗೆ ಕಾದು ನೋಡಿ ಎಂದು ಹೇಳಿ ನಾಮಪತ್ರ ಸಲ್ಲಿಕೆಯ ಬಗ್ಗೆ ಕುತೂಹಲ ಮೂಡಿಸಿದ್ದರು. ಇದೀಗ ಡಿ.ಕೆ.ಸುರೇಶ್ ಸ್ಪರ್ಧೆಯಿಂದ ಗುಟ್ಟು ಬಹಿರಂಗವಾಗಿದೆ.

ಇದನ್ನೂ ಓದಿ:ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡ ಗುರುಚರಣ್: ಪಕ್ಷಕ್ಕೆ ಸ್ವಾಗತಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ಕ್ರಿಮಿನಲ್​ಗಳ ಜೊತೆ ಶಾಮೀಲಾದವರನ್ನ ಕಾಂಗ್ರೆಸ್ ಸ್ಟಾರ್​​ ಪ್ರಚಾರಕ್ಕರನ್ನಾಗಿಸಿದೆ: ಶೋಭಾ ಕರಂದ್ಲಾಜೆ ಆರೋಪ

ಡಿ.ಕೆ.ಶಿವಕುಮಾರ್ ​ಸಲ್ಲಿಸಿದ್ದ ನಾಮಪತ್ರಕ್ಕೆ ತಕರಾರಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅದರಲ್ಲೂ ವಿಶೇಷವಾಗಿ ಆಸ್ತಿ ವಿವರಕ್ಕೆ ಸಂಬಂಧಿಸಿದಂತೆ ಕೆಲವರಿಂದ ಸಮಸ್ಯೆ ಉದ್ಭವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆಪ್ತರು ಹಾಗು ಕಾನೂನು ಸಲಹೆಗಾರರೊಂದಿಗೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ :ಕಾಂಗ್ರೆಸ್​ಗೆ ಬೆಂಬಲ ನೀಡಿದ ದಲಿತ ಸಂಘರ್ಷ ಸಮಿತಿಯ ಐಕ್ಯ ಹೋರಾಟ ಸಾಧನಾ ಸಮಿತಿ: ಕೈ ಹಿಡಿದ ಬಿಜೆಪಿ, ಜೆಡಿಎಸ್​ ನಾಯಕರು

ಕನಕಪುರ ವಿಧನಾಸಭಾ ಕ್ಷೇತ್ರದಿಂದ ಡಿಕೆಶಿ ಪುತ್ರಿ ಐಶ್ವರ್ಯ ಹೆಸರು ಕೂಡಾ ಕೇಳಿ ಬರುತ್ತಿತ್ತು. ಕಳೆದ ನಾಲ್ಕು‌ ತಿಂಗಳಿಂದ ಹೆಸರು ಚಾಲ್ತಿಯಲ್ಲಿತ್ತು. ಇದೀಗ ಡಿ.ಕೆ.ಸುರೇಶ್ ಅವರಿಂದ ನಾಮಪತ್ರ ಸಲ್ಲಿಕೆ ಮಾಡಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ನಾಮಪತ್ರ- ಡಿ.ಕೆ.ಸುರೇಶ್ :ಕನಕಪುರದಿಂದ ಸ್ಪರ್ಧೆ ಮಾಡೋದಕ್ಕೆ ಹೈಕಮಾಂಡ್ ಸೂಚನೆ ನೀಡಿತ್ತು. ಕೆಲವೊಂದು ಕುತಂತ್ರಗಳು ನಡೀತಿವೆ ಎಂದು ಗೊತ್ತಾಗ್ತಿದೆ. ಮುಂಜಾಗ್ರತಾ ಕ್ರಮವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

ಕನಕಪುರ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಮೇಲೆ ಸಾಕಷ್ಟು ಕಣ್ಣುಗಳು ಬಿದ್ದಿವೆ. ವಾಮಮಾರ್ಗದಿಂದ ಡಿಕೆಶಿಯನ್ನು ಮಣಿಸಲು ಬಿಜೆಪಿ ಪ್ಲಾನ್ ಮಾಡಿದೆ. ಡಿಕೆಶಿಯನ್ನು ಬಂಧಿಸುವುದು, ನೋಟಿಸ್ ನೀಡೋದು ನೀವೆಲ್ಲಾ ನೋಡಿದ್ದೀರಿ. ನಾಲ್ಕು ದಿನದ ಹಿಂದೆ ಕೂಡ ಚೆನ್ನೈಯಿಂದ ಐಟಿ ಅವರು ನೋಟಿಸ್ ನೀಡಿದ್ದರು. ಖುದ್ದು ನೀವೇ ಹಾಜರಾಗಬೇಕು ಎಂದು ಹೇಳಿದ್ದಾರೆ. ಚುನಾವಣೆ ಆದ ಮೇಲೆ ನಾವು ಬರ್ತೇವೆ ಎಂದು ಹೇಳಿದ್ದೇವೆ. ಅನಾವಶ್ಯಕವಾಗಿ ನಾವು ಬರೋದಿಲ್ಲ ಎಂದು ಹೇಳಿದ್ದೇವೆ. ನಮ್ಮ ಮೇಲಿನ ಕೇಸ್​ಗಳ ಮೇಲೆ ಎಲ್ಲ ಕಡೆ ತಡೆಯಾಜ್ಞೆಗಳಿವೆ. ಅಧಿಕಾರ ದುರುಪಯೋಗಪಡಿಸಿಕೊಂಡು ಡಿಕೆಶಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದರು.

ಬಿಜೆಪಿಯವರು ಮೊದಲೇ ಹೇಳಿದ್ದಾರೆ. ಟಿಕೆಟ್ ಘೋಷಣೆ ಮಾಡುವ ವೇಳೆ ಡಿಕೆಶಿಗೆ ಟಕ್ಕರ್ ಕೊಡ್ತೀವಿ ಅಂದಿದ್ದಾರೆ. ನಾವು ಕೂಡ ಮುಂಜಾಗ್ರತಾ ಕ್ರಮವಾಗಿ ರೆಡಿಯಾಗಿದ್ದೇವೆ. ಬಿಜೆಪಿ ಅವರು ಏನು ಮಾಡಿದ್ರೂ ಸಹ ಏನೂ ಆಗೋಲ್ಲ. ಅವರು ನಾಮಪತ್ರ ರಿಜೆಕ್ಟ್ ಮಾಡಿಸ್ತಾರೆ ಅನ್ನೋ ಅನುಮಾನವಿದ್ದು ನಾನು ಕನಕಪುರದಿಂದ ಸ್ಪರ್ಧೆ ಮಾಡಲು ನಾಮಪತ್ರ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಬದಲು: ಆದಿ ನಾರಾಯಣಗೆ ಬಿಫಾರಂ!

Last Updated : Apr 20, 2023, 7:16 PM IST

ABOUT THE AUTHOR

...view details