ರಾಮನಗರ:ಕರ್ನಾಟಕದ ಜನರು ಪ್ರಜ್ಞಾವಂತರಿದ್ದು, ತಾಯಿ ಸಮಾನವಾದ ಪಕ್ಷಕ್ಕೆ ದ್ರೋಹ ಬಗೆದವರಿಗೆ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಪಕ್ಷಾಂತರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಯಿ ಸಮಾನವಾದ ಪಕ್ಷಕ್ಕೆ ದ್ರೋಹ ಬಗೆದವರಿಗೆ ಜನರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸ್ತಾರೆ: ಡಿಕೆಶಿ - ರಾಮನಗರ ಸುದ್ದಿ
ಕರ್ನಾಟಕದ ಜನರು ಪ್ರಜ್ಞಾವಂತರಿದ್ದು,ತಾಯಿ ಸಮಾನವಾದ ಪಕ್ಷಕ್ಕೆ ದ್ರೋಹ ಬಗೆದವರಿಗೆ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಪಕ್ಷಾಂತರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳುವ ಮಾರ್ಗ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಈ ಹಿಂದೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ಜನರು ಪಕ್ಷಾಂತರಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಇಲ್ಲಿಯೂ ಅಂತಹದ್ದೇ ತೀರ್ಪು ಹೊರಬೀಳಲಿದೆ. ಹಾಗೆಯೇ ಕನಕಪುರ ಮೆಡಿಕಲ್ ಕಾಲೇಜು ವಿಚಾರದಲ್ಲಿ ನಾನು ಯಾವುದೇ ರಾಜಕೀಯ ಮಾಡುತ್ತಿಲ್ಲ.
ಯಡಿಯೂರಪ್ಪ ಚಿಕ್ಕಬಳ್ಳಾಪುರಕ್ಕೆ ನೂರು ಮೆಡಿಕಲ್ ಕಾಲೇಜು ಕೊಡಲಿ. ನಾನು ಅಲ್ಲಿಗೆ ಮಾಡಬೇಡ ಎಂದಿಲ್ಲ. ಆದರೆ ಸಿದ್ದರಾಮಯ್ಯ ನನ್ನ ಕ್ಷೇತ್ರಕ್ಕೆ ಕಾಲೇಜು ಮಂಜೂರು ಮಾಡಿದ್ರು,ಅದಕ್ಕೆ ಕುಮಾರಸ್ವಾಮಿ ಅನುದಾನ ನೀಡಿದ್ದರು. ಅದನ್ನು ಕಿತ್ತುಕೊಳ್ಳುವುದು ಸರಿಯಲ್ಲ. ಚುನಾವಣೆ ಬಳಿಕ ಈ ವಿಚಾರವಾಗಿ ಮಾತನಾಡುತ್ತೇನೆ ಎಂದರು.