ಕರ್ನಾಟಕ

karnataka

ETV Bharat / state

ಆಸ್ಪತ್ರೆಯಲ್ಲೇ ಕೊರೊನಾ ಸೋಂಕಿತ ಸ್ಟಾಫ್​ ನರ್ಸ್ ಹುಟ್ಟುಹಬ್ಬ ಆಚರಿಸಿದ ವೈದ್ಯರು - ಆಸ್ಪತ್ರೆಯಲ್ಲಿ ಸೋಂಕಿತನ ಹುಟ್ಟುಹಬ್ಬ ಆಚರಿಸಿದ ವೈದ್ಯರು

ರಾಮ ನಗರದಲ್ಲಿರುವ ರೆಫೆರಲ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಸ್ಟಾಫ್ ನರ್ಸ್ ಹುಟ್ಟುಹಬ್ಬವನ್ನು ಆಚರಿಸಲಾಗಿದೆ. ಈ ಮೂಲಕ ಸೋಂಕಿತರಿಗೆ ಧೈರ್ಯ ತುಂಬುವ ಕಾರ್ಯವನ್ನು ವೈದ್ಯರು ಮಾಡಿದ್ದಾರೆ.

Ramanagara
Ramanagara

By

Published : Jul 16, 2020, 3:18 PM IST

ರಾಮನಗರ:ಕೊರೊನಾ ಸೋಂಕಿತ ಸ್ಟಾಫ್ ನರ್ಸ್ ಹುಟ್ಟುಹಬ್ಬವನ್ನು ಆಸ್ಪತ್ರೆಯಲ್ಲಿ ಆಚರಣೆ ಮಾಡಲಾಗಿದ್ದು, ಆ ಮೂಲಕ ಜಿಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸೋಂಕಿತರಿಗೆ ಆತ್ಮ ಸ್ಥೈರ್ಯ ತುಂಬಿದ್ದಾರೆ.

ಜೀವದ ಹಂಗು ತೊರೆದು ಕೊರೊನಾ ವಾರಿಯರ್ಸ್ ಸೇವೆ ಸಲ್ಲಿಸುತ್ತಿದ್ದ ಸ್ಟಾಫ್​ ನರ್ಸ್ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರನ್ನು ಕೋವಿಡ್-19 ರೆಫೆರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇಂದು ಸೋಂಕಿತ ನರ್ಸ್ ಅವರ ಹುಟ್ಟುಹಬ್ಬವನ್ನು ಆಸ್ಪತ್ರೆ ವೈದ್ಯರು ಸೇರಿದಂತೆ ನರ್ಸ್​ಗಳು ಆಚರಿಸಿದ್ದು, ಕೊರೊನಾ ವಾರಿಯರ್ಸ್ ಗೆ ಸೋಂಕು ತಗಲುತ್ತೆ ಎಂಬ ಜಿಗುಪ್ಸೆ ಬಾರದಿರಲಿ ಎಂದು ಜಾಗೃತಿ‌ ಮೂಡಿಸಿದ್ದಾರೆ. ಇನ್ನು ಆಸ್ಪತ್ರೆಯ ಈ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

ಪಿಪಿಇ ಕಿಟ್ ಧರಿಸಿ ಜಿಲ್ಲಾ ಆರೋಗ್ಯಾಧಿಕಾರಿ, ವೈದ್ಯರು ಹಾಗೂ ಸಿಬ್ಬಂದಿ ಸೇರಿದಂತೆ ಸೋಂಕಿತ ಸ್ಟಾಫ್​ ನರ್ಸ್‌ನೊಂದಿಗೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಆಚರಿಸಿದರು. ಸೋಂಕಿನ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಆತ್ಮಬಲ ಹೆಚ್ಚಿಸುವ ನಿಟ್ಟಿನಲ್ಲಿ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್​ ತನ್ನ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸುವ ಮೂಲಕ ಸಂಭ್ರಮ ಹಂಚಿಕೊಂಡಿದೆ.

ABOUT THE AUTHOR

...view details