ರಾಮನಗರ : ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿ ತುಳಿದು ಸಾಯಿಸಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆನ್ನಿಗನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗ್ರಾಮದ ಸಿದ್ದಪ್ಪಾಜಿ ದೇವಸ್ಥಾನದ ಅರ್ಚಕರಾದ ಚನ್ನಪ್ಪ ಎಂಬವರ ಪತ್ನಿ ಚನ್ನಮ್ಮ ಎಂದು ಗುರುತಿಸಲಾಗಿದೆ. ಮುಂಜಾನೆ ಮನೆಯ ಹಿಂಬಾಗಿಲ ತೆರೆದು ಹೊರ ಬರುವಾಗ ಏಕಾಏಕಿ ಕಾಡಾನೆ ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ.
ರಾಮನಗರ: ಕಾಡಾನೆ ದಾಳಿಗೆ ಮಹಿಳೆ ಸಾವು - ಈಟಿವಿ ಭಾರತ ಕನ್ನಡ ನ್ಯೂಸ್
ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಾಮನಗರ : ಕಾಡಾನೆ ದಾಳಿಗೆ ಮಹಿಳೆ ಸಾವು
ಪದೇ ಪದೆ ಕಾಡಾನೆಗಳು ನಡೆಸುತ್ತಿರುವುದರಿಂದ ಈ ಭಾಗದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಹಲವು ಭಾರಿ ಅರಣ್ಯಾಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಆನೆಗಳ ದಾಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ :ಮಹಿಳೆಗೆ ಖಾರದಪುಡಿ ಎರಚಿ ಮಾಂಗಲ್ಯಸರ ಕದಿಯಲು ಯತ್ನ: ಸರಗಳ್ಳರನ್ನು ಹಿಡಿದು ಥಳಿಸಿದ ಗ್ರಾಮಸ್ಥರು!