ರಾಮನಗರ:ಮೇಕೆದಾಟು ಯೋಜನೆ ಶೀಘ್ರ ಜಾರಿಗೊಳಿಸುವಂತೆ ಒತ್ತಾಯಿಸಿ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುವುದಾಗಿ ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ ಘೋಷಿಸಿದೆ.
ರಾಮನಗರದ ರೈತ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂಘಟನೆಯ ಪದಾಧಿಕಾರಿಗಳು, ರಾಮನಗರ ಜಿಲ್ಲೆ ಕನಕಪುರದ ಮೇಕೆದಾಟುವಿನಿಂದ ಬೆಂಗಳೂರಿನ ವಿಧಾನಸೌಧದವರೆಗೆ ಆಗಸ್ಟ್ 3 ರಿಂದ 7ರವರೆಗೆ 5 ದಿನಗಳ ಕಾಲ ಪಾದಯಾತ್ರೆ ನಡೆಸಲಿದ್ದೇವೆ. ಕರ್ನಾಟಕ ರಾಜ್ಯ ರೈತ ಸಂಘದಿಂದ ನಡೆಯುವ ಪಾದಪಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು ಭಾಗಿಯಾಗಲಿದ್ದಾರೆ.