ರಾಮನಗರ:ಬಿಡದಿ ಪುರಸಭೆ ಸದಸ್ಯರ ಆಯ್ಕೆಗೆ ನಡೆಯುತ್ತಿರುವ ಮತದಾನದ ವೇಳೆ 1ನೇ ವಾರ್ಡ್ನ ಮತಗಟ್ಟೆ ಬಳಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ.
ಕಲ್ಲುಗೋಪಹಳ್ಳಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಜೆಡಿಎಸ್ ಕಾರ್ಯಕರ್ತ ಯಲ್ಲಪ್ಪ ಎಂಬವರ ಮೇಲೆ ಕಾಂಗ್ರೆಸ್ ಕಾರ್ಯಕರ್ತ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಮತದಾರರೊಂದಿಗೆ ಮತ ಕೇಳುವ ವಿಚಾರದಲ್ಲಿ ಗಲಾಟೆ ನಡೆದಿದೆ ಎನ್ನಲಾಗ್ತಿದೆ. ಪೊಲೀಸರು ಬಿಗುವಿನ ವಾತಾವರಣವನ್ನು ತಿಳಿಗೊಳಿಸಿದ್ದಾರೆ.