ರಾಮನಗರ:ಕಂಚುಗಲ್ ಬಂಡೆಮಠ ಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂರು ಪುಟಗಳ ಡೆತ್ನೋಟ್ ಪತ್ತೆಯಾಗಿದೆ. ಬಸವಲಿಂಗ ಶ್ರೀಗಳಿಗೆ ಕಿರುಕುಳ ನೀಡ್ತಿದ್ದವರ ಹೆಸರನ್ನು ಡೆತ್ ನೋಟ್ನಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗ್ತಿದೆ.
ಮಠಕ್ಕೆ ಭೇಟಿ ನೀಡಿದ್ದ ಮಾಜಿ ಶಾಸಕ ಹೆಚ್ ಸಿ ಬಾಲಕೃಷ್ಣ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಶ್ರೀಗಳು ಈ ಭಾಗದಲ್ಲಿ ಬಡ ಮಕ್ಕಳ ಶಿಕ್ಷಣಕ್ಕಾಗಿ ಅನುಕೂಲ ಮಾಡಿಕೊಟ್ಟಿದ್ದರು. ಮಾನಸಿಕವಾಗಿ ತುಂಬ ಸದೃಢವಾಗಿದ್ದರು. ಅವರ ಅಗಲಿಕೆ ಬೇಸರ ತರಿಸಿದೆ ಎಂದು ಕಂಬನಿ ಮಿಡಿದರು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಟ್ಟಿಸಿರುವ ಹಾಸ್ಟೆಲ್ ಉದ್ಘಾಟನೆಗೆ ಸ್ವಾಮೀಜಿ ತಮ್ಮನ್ನು ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಆಹ್ವಾನಿಸಿದ್ದರು. ಆದ್ರೆ ಇಷ್ಟರಲ್ಲಿ ಇಂತಹ ದುರಂತ ನಡೆದಿದೆ ಎಂದರು.