ಕರ್ನಾಟಕ

karnataka

ETV Bharat / state

ಕ್ವಾರಂಟೈನ್ ನಿಯಮ ಉಲ್ಲಂಘನೆ: ರಾಮನಗರದಲ್ಲಿ ಎಂಟು ಜನರ ವಿರುದ್ಧ ಎಫ್ಐಆರ್ - Ramanagara latest news

ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದ ರಾಮನಗರದ ಎಂಟು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

Ramanagara
Ramanagara

By

Published : Jun 28, 2020, 6:37 PM IST

ರಾಮನಗರ :ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿ ಹೊರಗೆ ಓಡಾಡುತ್ತಿದ್ದ ಜಿಲ್ಲೆಯ ಎಂಟು ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ತಾಲೂಕಿನ ಮತ್ತು ಕನಕಪುರ ತಾಲೂಕಿನ ತಲಾ ನಾಲ್ಕು ಮಂದಿಯ ಮೇಲೆ ಸಂಬಂಧಪಟ್ಟ ತಾಲೂಕು ದಂಡಾಧಿಕಾರಿಗಳು ಆಯಾ ತಾಲೂಕು ಆರಕ್ಷಕ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇವರೆಲ್ಲ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೊರಡಿಸಲಾದ ಮಾದರಿ ಮಾರ್ಗಸೂಚಿಗಳನ್ನು ಪಾಲಿಸದಿರುವ ಕಾರಣ ಎಫ್ಐಆರ್ ದಾಖಲಿಸಲಾಗಿದೆ. ಇವರಿಗೆ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷ ಎಂ.ಎಸ್. ಅರ್ಚನಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details