ಕರ್ನಾಟಕ

karnataka

ETV Bharat / state

ರಾಮನಗರ : ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಪೊಲೀಸ್ ಠಾಣಾವಾರು ತಂಡ ರಚನೆ - ramanagara Police Stations

ರಸ್ತೆ ಕಾಮಗಾರಿಗಳು ನಡೆಯುತ್ತಿರುತ್ತವೆ. ಕಾಮಗಾರಿ ನಡೆಯುವ ರಸ್ತೆಗಳಿಗೆ ಬ್ಯಾರಿಕೇಡ್​ ಹಾಕುವುದು, ಸೂಚನಾ ಫಲಕ ಅಳವಡಿಕೆ ಹಾಗೂ ಪರ್ಯಾಯ ರಸ್ತೆ ವ್ಯವಸ್ಥೆ ಮಾಡುವಾಗ ಸಂಬಂಧಪಟ್ಟ ಇಲಾಖೆಗಳು ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಸಮನ್ವಯತೆಯಿಂದ ಕೆಲಸ ಮಾಡಬೇಕು..

Formation of group at ramanagara Police Stations to Control the Road Accidents
ರಾಮನಗರ: ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಪೊಲೀಸ್ ಠಾಣಾವಾರು ತಂಡ ರಚನೆ

By

Published : Feb 24, 2021, 5:00 PM IST

ರಾಮನಗರ: ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕ‌ ಗಿರೀಶ್ ಅವರು ಪೊಲೀಸ್ ಠಾಣಾವಾರು ತಂಡ ರಚಿಸಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಸ್ತೆ ಸುರಾಕ್ಷತಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಸ್ತೆಗಳಲ್ಲಿ ಇರುವ ಹಂಪ್, ಕವ್೯ಗಳು ವಾಹನ ಚಾಲಕರಿಗೆ ಗೋಚರವಾಗುವುದಿಲ್ಲ. ರಸ್ತೆಗಳನ್ನು ಲೋಕೋಪಯೋಗಿ ಹಾಗೂ ಪೊಲೀಸ್ ಇಲಾಖೆಯವರು ಜಂಟಿಯಾಗಿ ಪರಿಶೀಲಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರೆ ಅಪಘಾತಗಳನ್ನು ತಡೆಯಬಹುದು ಎಂದರು.

ರಸ್ತೆ ಅಪಘಾತ ತಡೆಗಟ್ಟಲು ರಚಿಸಲಾಗಿರುವ ತಂಡದಲ್ಲಿ ಲೋಕೋಪಯೋಗಿ, ಪೊಲೀಸ್ ಇಲಾಖೆ, ಅವಶ್ಯಕವಿದ್ದ ಕಡೆ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಇರುತ್ತಾರೆ. ತಂಡವು ವಾರಕ್ಕೊಮ್ಮೆ ಸಭೆ ನಡೆಸಬೇಕು. ಉಪ ಪೊಲೀಸ್ ಅಧೀಕ್ಷಕರು ತಮ್ಮ ವ್ಯಾಪ್ತಿಗೆ ಬರುವ ತಂಡಗಳ ಜೊತೆ 15 ದಿನಗಳಿಗೊಮ್ಮೆ ಸಭೆ ನಡೆಸಬೇಕು.

ರಸ್ತೆ ಅಪಘಾತದಲ್ಲಿ ಮೃತಪಡುವ ಪ್ರಕರಣಗಳನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸುತ್ತದೆ. ಇಲಾಖೆಯವರು ಮುಂಜಾಗ್ರತಾ ಕ್ರಮಗಳನ್ನು ಏಕೆ ವಹಿಸಲಿಲ್ಲ ಎಂದು ಪ್ರಶ್ನಿಸುತ್ತದೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ:ಚಿರತೆ ಜೊತೆ ಸೆಣಸಿ ತನ್ನ ತಾಯಿ ರಕ್ಷಿಸಿದ್ದ ಯುವಕನ ಶೌರ್ಯ ಕೊಂಡಾಡಿದ ಡಿಕೆಶಿ

ರಸ್ತೆ ಕಾಮಗಾರಿಗಳು ನಡೆಯುತ್ತಿರುತ್ತವೆ. ಕಾಮಗಾರಿ ನಡೆಯುವ ರಸ್ತೆಗಳಿಗೆ ಬ್ಯಾರಿಕೇಡ್​ ಹಾಕುವುದು, ಸೂಚನಾ ಫಲಕ ಅಳವಡಿಕೆ ಹಾಗೂ ಪರ್ಯಾಯ ರಸ್ತೆ ವ್ಯವಸ್ಥೆ ಮಾಡುವಾಗ ಸಂಬಂಧಪಟ್ಟ ಇಲಾಖೆಗಳು ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದರು.

ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುವುದು, ವಾಹನ‌ ನಿಲುಗಡೆ ಇಲ್ಲದ ಪ್ರದೇಶಗಳಲ್ಲಿ ವಾಹನ ನಿಲುಗಡೆ ಮಾಡುವುದು, ಮದ್ಯಪಾನ ಸೇವನೆ ಮಾಡಿ ವಾಹನ ಚಾಲನೆ ಮಾಡುವುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ತಳ್ಳುವ ಗಾಡಿಯಲ್ಲಿ ಹೋಟೆಲ್‌ ನಡೆಸುತ್ತಿದ್ದಾರೆ. ಹಾಗಾಗಿ, ಸಾರ್ವಜನಿಕರು ಆಹಾರ ಸೇವನೆ ಮಾಡಲು ರಸ್ತೆಯಲ್ಲೇ ವಾಹನ ನಿಲುಗಡೆ ಮಾಡಿ, ಜನಸಂದಣಿ ಉಂಟು ಮಾಡುತ್ತಾರೆ. ಇದರಿಂದ ವಾಹನ ಚಾಲನೆಗೆ ತೊಂದರೆಯಾಗಿ ಅಪಘಾತ ಉಂಟಾಗುವ ಸಂಭವವಿರುತ್ತದೆ. ಇವುಗಳನ್ನು ಪರಿಶೀಲಿಸಿ ತೆರವುಗೊಳಿಸಿ ಎಂದರು.

ABOUT THE AUTHOR

...view details