ರಾಮನಗರ :ಹಸಿದವರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕ್ಕೊಳ್ಳಿ ಅಂತಾರಲ್ಲ, ಆ ರೀತಿ ಇದೆ ಈ ಕೇಂದ್ರ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬಜೆಟ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ರಾಮನಗರದ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರಾವರಿ ಯೋಜನೆಗಳನ್ನು ಜೋಡಿಸುವ ಪ್ರಸ್ತಾವನೆಯನ್ನು ಬಜೆಟ್ನಲ್ಲಿ ಹೇಳಲಾಗಿದೆ. ಅವೆಲ್ಲಾ ಎಷ್ಟರ ಮಟ್ಟಿಗೆ ಕಾರ್ಯಾರಂಭಕ್ಕೆ ಬರುತ್ತದೆ ಅನ್ನೋದನ್ನು ನೋಡಬೇಕು ಎಂದರು.