ಕರ್ನಾಟಕ

karnataka

ETV Bharat / state

ಕೈಗಾರಿಕೆಗಳು ಕರ್ನಾಟಕದ ಪ್ರತಿಭಾವಂತ ಯುವ ಜನರನ್ನು ಪರಿಗಣಿಸಬೇಕು: ಹೆಚ್ ​ಡಿ ಕುಮಾರಸ್ವಾಮಿ

ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಘಟಕಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಕಂಪನಿಯ ಉನ್ನತ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

By

Published : Aug 22, 2022, 9:35 PM IST

ರಾಮನಗರ:ರಾಜ್ಯದಲ್ಲಿರುವ ಕೈಗಾರಿಕೆಗಳು ಉದ್ಯೋಗ ನೀಡುವಾಗ ಕನ್ನಡಿಗ ಪ್ರತಿಭಾವಂತ ಯುವಜನರನ್ನು ಆದ್ಯತೆಯ ಮೇರೆಗೆ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಘಟಕಕ್ಕೆ ಭೇಟಿ ನೀಡಿ ಕಂಪನಿಯ ಉನ್ನತ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಅವರು, ಕಂಪನಿಯಲ್ಲಿ ಸ್ಥಳೀಯ ಪ್ರತಿಭಾವಂತರಿಗೆ ಯಾವುದೇ ಕಾರಣಕ್ಕೂ ಅನ್ಯಾಯ ಆಗಬಾರದು ಹಾಗೂ ಅನಗತ್ಯವಾಗಿ ಹೊರರಾಜ್ಯದವರನ್ನು ಕರೆತಂದು ತುಂಬಿಸಬಾರದು ಎಂದರು.

ಟೊಯೊಟಾ ಕಿರ್ಲೋಸ್ಕರ್ ಘಟಕಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿ

ಹೊಸ ಘಟಕ ಸ್ಥಾಪನೆ ಹಾಗೂ ನೇಮಕಾತಿ ಸಂದರ್ಭದಲ್ಲಿ ಸ್ಥಳೀಯ ಯುವಕರನ್ನೇ ಪರಿಗಣಿಸಬೇಕು. ಕನ್ನಡಿಗರಿಗೆ ಅನ್ಯಾಯ ಆಗುವುದನ್ನು ಸಹಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ನೇರ ಮಾತುಗಳಲ್ಲಿ ಕಂಪನಿಗಳ ಅಧಿಕಾರಿಗಳಿಗೆ ಹೇಳಿದರು.

ರಾಜ್ಯದಲ್ಲಿ ಅತ್ಯುತ್ತಮ ಗುಣಮಟ್ಟದ ತಾಂತ್ರಿಕ ಶಿಕ್ಷಣ ವ್ಯವಸ್ಥೆ ಇದ್ದು, ಪ್ರತಿಭಾವಂತ ಮಾನವ ಸಂಪನ್ಮೂಲ ಲಭ್ಯವಿದೆ. ಹೀಗಾಗಿ, ಸ್ಥಳೀಯ ಪ್ರತಿಭೆಗಳನ್ನು ಗುರುತಿಸಬೇಕು ಎಂದು ಸೂಚಿಸಿದರು.

ಟೊಯೊಟಾ ಕಿರ್ಲೋಸ್ಕರ್ ಘಟಕಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿ

ಕಾರು ತಯಾರಿಕಾ ಘಟಕ ವೀಕ್ಷಿಸಿದ ಮಾಜಿ ಸಿಎಂ - ಕಂಪನಿಯ ಅಧಿಕಾರಿಗಳ ಸಭೆಗೂ ಮುನ್ನ ಮಾಜಿ ಮುಖ್ಯಮಂತ್ರಿಗಳು ಟೊಯೊಟಾ ಕಿರ್ಲೋಸ್ಕರ್ ಕಾರು ತಯಾರಿಕಾ ಘಟಕ ವೀಕ್ಷಿಸಿದರು. ಫಾರ್ಚುನರ್, ಇನ್ನೋವಾ ಹಾಗೂ ಟೊಯೊಟಾ ಹೈಬ್ರಿಡ್ ಎಲೆಕ್ಟ್ರಿಕ್ ಕಾರುಗಳ ತಯಾರಿಕೆ ಘಟಕಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಅಲ್ಲದೆ, ಅಲ್ಲಿನ ತಾಂತ್ರಿಕ ಮಾಹಿತಿ, ಉದ್ಯೋಗಿಗಳಿಗೆ ನೀಡಲಾಗಿರುವ ಸೌಲಭ್ಯಗಳು ಇತ್ಯಾದಿಗಳ ಬಗ್ಗೆ ವಿವರ ಪಡೆದುಕೊಂಡರು.

ಈ ಮಾತುಕತೆ ಸಂದರ್ಭದಲ್ಲಿ ಮಾಜಿ ಸಚಿವ ಡಿ. ಸಿ ತಮ್ಮಣ್ಣ, ಶಾಸಕರಾದ ಮಂಜುನಾಥ್, ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ರಾಜು ಕೆರಕಲೆ ಮತ್ತು ಸ್ವಪ್ನೇಶ್ ಮಾರು, ಉಪಾಧ್ಯಕ್ಷರಾದ ಶಂಕರ್ ಮತ್ತು ವಿನಯ್ ಹಾಗೂ ಕಾರ್ಯನಿರ್ವಾಹಕ ಸಲಹೆಗಾರ ಪರಶುರಾಮ್ ಮುಂತಾದವರು ಉಪಸ್ಥಿತರಿದ್ದರು.

ಓದಿ:ಅವೈಜ್ಞಾನಿಕ ರಸ್ತೆ ಕಾಮಗಾರಿ ಆರೋಪ: ರಾಮನಗರದಲ್ಲಿ ವಿಶೇಷಚೇತನ ಸಹೋದರರ ಪ್ರತಿಭಟನೆ

ABOUT THE AUTHOR

...view details