ರಾಮನಗರ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಬಿಡದಿಯ ಕೇತುಗಾನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಗಣೇಶೋತ್ಸವ ಸಂಭ್ರಮ ಮನೆ ಮಾಡಿದೆ.
ಬಿಡದಿ ತೋಟದ ಮನೆಯಲ್ಲಿ ಕುಮಾರಸ್ವಾಮಿ ಗಣೇಶ ಹಬ್ಬ ಆಚರಣೆ ಮಾಡುತ್ತಿದ್ದು, ಗಣಪತಿ ವೇಷ ಧರಿಸಿದ ಬಾಲಕನೊಬ್ಬ ಕುಮಾರಸ್ವಾಮಿಯನ್ನು ಭೇಟಿ ಮಾಡಲು ಆಗಮಿಸಿದ್ದ. ಗಣೇಶ ವೇಷಧಾರಿ ಬಾಲಕನ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಕೆಲ ಕಾಲ ಮಾತುಕತೆ ನಡೆಸಿದರು.