ಕರ್ನಾಟಕ

karnataka

ETV Bharat / state

ಮೋದಿಗೂ ಮುನ್ನ ಚನ್ನಪಟ್ಟಣಕ್ಕೆ ಆಗಮಿಸಿದ ಮಾಜಿ ಪ್ರಧಾನಿ : ಕುಮಾರಸ್ವಾಮಿ ಪರ ಹೆಚ್​​ಡಿಡಿ ಮತಯಾಚನೆ - ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಇಂದು ಬೊಂಬೆನಗರಿ ಚನ್ನಪಟ್ಟಣಕ್ಕೆ ಆಗಮಿಸಿದ್ದಾರೆ.

Former PM HD Deve Gowda
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

By

Published : Apr 30, 2023, 12:25 PM IST

ರಾಮನಗರ:ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲು ಚನ್ನಪಟ್ಟಣಕ್ಕೆ ಆಗಮಿಸಲಿದ್ದಾರೆ. ಇದಕ್ಕೂ ಮುನ್ನ ಬಿಜೆಪಿಗೆ ಠಕ್ಕರ್‌ ಕೊಡಲು ಇದೀಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಬೊಂಬೆನಗರಿ ಚನ್ನಪಟ್ಟಣಕ್ಕೆ ಆಗಮಿಸಿದ್ದಾರೆ. ತಾಲೂಕಿನ ಇಗ್ಗಲೂರು ಗ್ರಾಮದಲ್ಲಿ ಜೆಡಿಎಸ್​ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್​​ಡಿಡಿ ಅವರು ಹೆಚ್ ಡಿ ಕುಮಾರಸ್ವಾಮಿ ಪರ ಮತಯಾಚನೆ ಮಾಡಲಿದ್ದಾರೆ.

ಹೆಲಿಕಾಪ್ಟರ್ ಮೂಲಕ ಆಗಮಿಸಿದ ದೇವೇಗೌಡ ಅವರು ಜೆಡಿಎಸ್ ಸಮಾವೇಶಕ್ಕೂ ಮುನ್ನ ಇಗ್ಗಲೂರು ಜಲಾಶಯ ವೀಕ್ಷಣೆ ಮಾಡಿದರು. 90ರ ದಶಕದಲ್ಲಿ ಹೆಚ್.ಡಿ. ದೇವೇಗೌಡರು ನೀರಾವರಿ ಸಚಿವರಾಗಿದ್ದ ವೇಳೆ ಅವರ ಹೆಸರಿನಲ್ಲೇ 'ದೇವೇಗೌಡ ಬ್ಯಾರೇಜ್' ನಿರ್ಮಿಸಲಾಗಿತ್ತು. ಚನ್ನಪಟ್ಟಣ ತಾಲೂಕಿಗೆ ನೀರಾವರಿ ಸೌಕರ್ಯ ಒದಗಿಸುವ ಬ್ಯಾರೇಜ್ ಇದಾಗಿದೆ.

ಇದನ್ನೂ ಓದಿ:ಕೊಟ್ಟ ಮಾತು ಉಳಿಸಿಕೊಳ್ಳುವ ರಾಜಕಾರಣಿ ಕುಮಾರಸ್ವಾಮಿ: ಹೆಚ್ ಡಿ ದೇವೇಗೌಡ

ಇನ್ನು ಪ್ರಧಾನಿ ಮೋದಿ ಆಗಮನದ ಕುರಿತು ಪ್ರತಿಕ್ರಿಯಿಸಿದ ದೇವೇಗೌಡ ಅವರು, ನಾನು ಮೊದಲ ಬಾರಿಗೆ ಕುಮಾರಸ್ವಾಮಿ ಅವರ ಕ್ಷೇತ್ರದಲ್ಲಿ ಪ್ರಚಾರಕ್ಕಾಗಿ ಬಂದಿದ್ದೇನೆ. ಇದನ್ನು ಮುಗಿಸಿ ಬೇರೆ ಕ್ಷೇತ್ರಗಳಿಗೆ ಹೋಗುತ್ತೇನೆ. ಪ್ರಧಾನಿಗಳು ಬರುತ್ತಿದ್ದಾರೆ. ಗೊತ್ತಿದೆ ನನಗೆ. ಅವರು ಬರುವುದರೊಳಗೆ ನನ್ನ ಕಾರ್ಯಕ್ರಮ ಮುಗಿಯಲಿದೆ. ಅವರು ಬರೋದನ್ನು ಬೇಡ ಎನ್ನಲು ಆಗುತ್ತದೆಯಾ?. ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ ಎಂದರು.

ಇದನ್ನೂ ಓದಿ:ಮಾತನಾಡುವುದು ಸುಲಭ, ಜೀರ್ಣಿಸಿಕೊಳ್ಳುವುದು ಕಷ್ಟ : ಹೆಚ್ ಡಿ ದೇವೇಗೌಡ

ಚನ್ನಪಟ್ಟಣದಲ್ಲಿ ಪ್ರಧಾನಿ ಬೃಹತ್​ ಸಮಾವೇಶ: ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೋಲಾರ, ಚನ್ನಪಟ್ಟಣದಲ್ಲಿ ಬೃಹತ್​​ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಮೈಸೂರಿಗೆ ತೆರಳಿ ಮೆಗಾ ರೋಡ್​​ ಶೋ ನಡೆಸಲಿದ್ದಾರೆ.

ಪ್ರಧಾನಿ ಮೋದಿ ಅವರು ಬೆಂಗಳೂರಿನಿಂದ ಹೆಲಿಕಾಪ್ಟರ್ ಮುಖಾಂತರ ಕೋಲಾರಕ್ಕೆ ಆಗಮಿಸಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದಾರೆ. ಈ ವೇಳೆ 1 ಗಂಟೆ 10 ನಿಮಿಷಗಳ ಕಾಲ‌ ಜನರನ್ನ ಉದ್ದೇಶಿಸಿ ಮಾತನಾಡಿದರು. ಈ ಬಾರಿಯ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ರಾಷ್ಟ್ರೀಯ ನಾಯಕರು ಈಗ ಪ್ರಧಾನಿಯವರನ್ನೇ ಜಿಲ್ಲೆಗೆ ಕರೆತಂದಿದ್ದಾರೆ. ಬೃಹತ್ ಸಮಾವೇಶದ ಮೂಲಕ ಜಿಲ್ಲೆಯಲ್ಲಿ ಮತದಾರರನ್ನು ತಮ್ಮತ್ತ ಸೆಳೆಯುವ ಪ್ರಯತ್ನಕ್ಕೆ ಮುಂದಾಗಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿರುವ ಕೋಲಾರ, ಚಿಕ್ಕಬಳ್ಳಾಪುರ ಮತ್ತು‌ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಮಲ ಅರಳಿಸಲು ಬಿಜೆಪಿ ರಣತಂತ್ರ ರೂಪಿಸಿದೆ. ಕೋಲಾರ ಸಮಾವೇಶದ ಬಳಿಕ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮತ್ತಿಕೆರೆ ಗ್ರಾಮದಲ್ಲಿ ಬೃಹತ್ ಸಮಾವೇಶದಲ್ಲಿ ಮೋದಿ ಭಾಗಿಯಾಗಲಿದ್ದಾರೆ.

ಮೈಸೂರಿನಲ್ಲಿ‌ 4ಕಿ.ಮೀ. ಮೋದಿ ರೋಡ್ ಶೋ:ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು ನಗರದಲ್ಲಿ ಇಂದು ಸಂಜೆ 4 ಕಿ.ಮೀ. ಬೃಹತ್ ರೋಡ್ ಶೋ ನಡೆಸಲಿದ್ದಾರೆ.

ಇದನ್ನೂ ಓದಿ:ಇಂದು ಕೋಲಾರ, ಚನ್ನಪಟ್ಟಣದಲ್ಲಿ ಪ್ರಧಾನಿ ಮೋದಿ ಬೃಹತ್​ ಸಮಾವೇಶ: ಮೈಸೂರಲ್ಲಿ ಮೆಗಾ ರೋಡ್​​ ಶೋ

ABOUT THE AUTHOR

...view details