ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ: ಡಿಕೆಶಿ, ಸಿದ್ದರಾಮಯ್ಯ ಸೇರಿ 29 ಮಂದಿ ವಿರುದ್ಧ 4ನೇ ಎಫ್​ಐಆರ್ ದಾಖಲು - ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್​ ನಿಯಮ ಉಲ್ಲಂಘನೆ

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್​ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ​ಡಿ.ಕೆ.ಸುರೇಶ್ ಸೇರಿದಂತೆ 29ಕ್ಕೂ ಹೆಚ್ಚು ಮಂದಿಯ ವಿರುದ್ಧ 4ನೇ ಎಫ್​ಐಆರ್​​ ದಾಖಲಿಸಲಾಗಿದೆ.

Congress mekedatu padayatra
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ

By

Published : Jan 13, 2022, 8:37 AM IST

Updated : Jan 13, 2022, 8:46 AM IST

ರಾಮನಗರ: ಕಾಂಗ್ರೆಸ್​ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್​ ನಿಯಮಾವಳಿ ಉಲ್ಲಂಘಿಸಿದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಸೇರಿದಂತೆ 29ಕ್ಕೂ ಹೆಚ್ಚು ಮಂದಿಯ ವಿರುದ್ಧ ನಾಲ್ಕನೇ ಎಫ್​ಐಆರ್​​ ದಾಖಲಾಗಿದೆ.

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಡಿ.ಕೆ.ಸುರೇಶ್ ಸೇರಿದಂತೆ 29ಕ್ಕೂ ಹೆಚ್ಚು ಮಂದಿಯ ವಿರುದ್ಧ ರಾಮನಗರ ತಹಶೀಲ್ದಾರ್ ವಿಜಯಕುಮಾರ್ ನೀಡಿರುವ ದೂರಿನ ಮೇಲೆ ರಾಮನಗರ ಗ್ರಾಮಾಂತರ ವೃತ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಲ್ಕನೇ ಎಫ್​ಐಆರ್​ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಡಿ.ಕೆ. ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್​, ಶಾಸಕ ಪ್ರಿಯಾಂಕ್​ ಖರ್ಗೆ, ಮಾಜಿ ಸಚಿವ ಟಿಬಿ ಜಯಚಂದ್ರ ಸೇರಿದಂತೆ ಇನ್ನೂ ಇತರರ ಹೆಸರಿದೆ.

ಪಾದಯಾತ್ರೆಗೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್​ ವಿರುದ್ಧ ದಾಖಲಾದ ನಾಲ್ಕನೇ ಎಫ್ ಐಆರ್ ಇದಾಗಿದ್ದು, ಸಿದ್ದರಾಮಯ್ಯ ವಿರುದ್ಧ ಮೂರು ಕೇಸ್​ ದಾಖಲಾಗಿದೆ. ಸೋಮವಾರ ಸಹ ರಾಮನಗರದ ಸಾತನೂರು ಪೊಲೀಸರು 64 ಮಂದಿಯ ವಿರುದ್ಧ ಎಫ್​ಐಆರ್​​ ದಾಖಲಿಸಲಾಗಿತ್ತು.

ಇದನ್ನೂ ಓದಿ:ಕಾಂಗ್ರೆಸ್​ ಮೇಕೆದಾಟು ಪಾದಯಾತ್ರೆ: ಡ್ರೋನ್​ನಲ್ಲಿ ಸೆರೆ ಹಿಡಿದ ದೃಶ್ಯಗಳ ಝಲಕ್ ಇದು!

Last Updated : Jan 13, 2022, 8:46 AM IST

ABOUT THE AUTHOR

...view details