ರಾಮನಗರ:ಜಿಲ್ಲೆಯಲ್ಲಿ ಅತ್ಯಾಧುನಿಕ ಹೈಟೆಕ್ 'ರೇಷ್ಮೆ ಮಾರುಕಟ್ಟೆ' ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಮನಗರ - ಚನ್ನಪಟ್ಟಣ ಅವಳಿ ನಗರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಲಾಗಿದ್ದು, ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ಇದೀಗ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ:ಕರ್ನಾಟಕದಲ್ಲೇ ಮೊದಲ ಬಾರಿಗೆ 'ಇಂಟ್ರಾ ಆಪರೇಟಿವ್ ರೇಡಿಯೋ ಥೆರಪಿ': ಕೇವಲ 30 ನಿಮಿಷದಲ್ಲಿ ಚಿಕಿತ್ಸೆ
10 ದಿನದೊಳಗೆ ಟೆಂಡರ್ ಆಹ್ವಾನ: ರಾಮನಗರ ಮಾರುಕಟ್ಟೆಗೆ ಪ್ರತಿದಿನ 40 - 50 ಟನ್ ರೇಷ್ಮೆಗೂಡು ಬರುತ್ತಿದ್ದು, ಹೈಟೆಕ್ ಮಾರುಕಟ್ಟೆ ನಿರ್ಮಾಣವಾದ ಬಳಿಕ 100-150 ಟನ್‌ನಷ್ಟು ರೇಷ್ಮೆಗೂಡು ಮಾರುಕಟ್ಟೆಗೆ ಬರುವ ನಿರೀಕ್ಷೆ ಇದೆ. ಹಾಗಾಗಿ 10 ದಿನದೊಳಗೆ ಟೆಂಡರ್ ಕರೆದು, ಆದಷ್ಟು ಬೇಗ ಶಂಕುಸ್ಥಾಪನೆ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರೇಷ್ಮೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.