ರಾಮನಗರ:ಕಾಫಿ ತೋಟದ ಮಾಲೀಕ, ಖ್ಯಾತ ಉದ್ಯಮಿ ಸಿದ್ಧಾರ್ಥ ಅವರ ಸಾವು ಸಹಜವಲ್ಲ. ಅದು ಅನುಮಾನಾಸ್ಪದ ಸಾವು. ಹಾಗಾಗಿ ಈ ಪ್ರಕರಣವನ್ನ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕೆಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ವೆಂಕಟಸ್ವಾಮಿ ಒತ್ತಾಯಿಸಿದರು.
ಸಿದ್ಧಾರ್ಥ್ ಸಾವಿನ ಪ್ರಕರಣ ಸಿಬಿಐಗೆ ವಹಿಸಿ: ವೆಂಕಟಸ್ವಾಮಿ ಒತ್ತಾಯ - ಸಿದ್ಧಾರ್ಥ ಸಾವು ಪ್ರಕರಣ
ಸಿಸಿಡಿ ಮಾಲೀಕ ಸಿದ್ಧಾರ್ಥ ಅವರ ಸಾವು ಸಹಜವಲ್ಲ. ಅದು ಅನುಮಾನಾಸ್ಪದ ಸಾವು. ಹಾಗಾಗಿ ಈ ಪ್ರಕರಣವನ್ನ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕೆಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ವೆಂಕಟಸ್ವಾಮಿ ಒತ್ತಾಯಿಸಿದರು.
ನಗರದ ಹೊರವಲಯದಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರಕರಣ ತನಿಖೆ ಹಂತದಲ್ಲಿರುವಾಗಲೇ ಅಲ್ಲಿನ ಎಸ್ಪಿ ಸಂದೀಪ್ ಪಾಟೀಲ್‌ರನ್ನ ಸಿಎಂ ಯಡಿಯೂರಪ್ಪ ಅವರ ಸರ್ಕಾರ ವರ್ಗಾವಣೆ ಮಾಡಿರುವುದು ಸರಿಯಲ್ಲವೆಂದರು.
ಟಿಪ್ಪು ಜಯಂತಿ ಆಚರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯನವರು ತಮ್ಮ ವೋಟ್ ಬ್ಯಾಂಕ್‌ಗಾಗಿ ಟಿಪ್ಪು ಜಯಂತಿ ಆಚರಣೆ ಬಳಸಿಕೊಂಡಿದ್ದರು. ಆದರೆ ಈಗ ಯಡಿಯೂರಪ್ಪನವರು ಟಿಪ್ಪು ಜಯಂತಿಯನ್ನ ಬ್ಯಾನ್ ಮಾಡಿದ್ದಾರೆ. ಖಾಸಗಿಯಾಗಿ ಟಿಪ್ಪು ಜಯಂತಿ ಆಚರಣೆ ಮಾಡಿಕೊಳ್ಳುವುದಕ್ಕೆ ಯಾವುದೇ ಅಡೆತಡೆ, ತೊಂದರೆಯಿಲ್ಲ. ಆದರೆ ಮತ್ತೆ ಇದೇ ವಿಚಾರವನ್ನ ಸಿದ್ದರಾಮಯ್ಯನವರು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವುದು ಸರಿಯಲ್ಲವೆಂದು ಅಭಿಪ್ರಾಯಪಟ್ಟರು.